September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

ಉಜಿರೆ: ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ತಮ್ಮ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ಗಳನ್ನು ಕಾಲೇಜಿನ ಕ್ರೀಡಾ ವಿಭಾಗದಲ್ಲಿ ಸಾಧನೆಗೈದಿರುವ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ವಿತರಿಸಿದರು.


ಈ ಸಂದರ್ಭದಲ್ಲಿ ಕಾಲೇಜ್ ನೀಡಿರುವ ಪ್ರೋತ್ಸಾಹ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರ ನಿರಂತರ ತರಬೇತಿಯನ್ನು ಕು. ಚಿನ್ಮಯಿ ನೆನಪಿಸಿಕೊಂಡರು.


ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್, ಚಿನ್ಮಯಿಯವರ ಈ ಕೊಡುಗೆಗೆ ಮೆಚ್ಚುಗೆ ವ್ಯಕ್ತಪಡಿಸಿ ಈ ಕಾರ್ಯ ಇತರರಿಗೆ ಮಾದರಿಯಾಗಲಿ ಎಂದು ಶುಭಹಾರೈಸಿದರು.


ವೇದಿಕೆಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಭಾಕರ್ ಮತ್ತು ನಿತಿನ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಚಿರಂತ್ ಸ್ವಾಗತಿಸಿ, ಪ್ರದೀಪ್ ವಂದಿಸಿದರು. ಪುನೀತ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆ

Suddi Udaya

ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2023ನೇ ವರ್ಷದ ಚಟುವಟಿಕೆಗಳು ಸಂಪನ್ನ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿಮಂಡಲದ ಚುನಾವಣೆ

Suddi Udaya
error: Content is protected !!