27.5 C
ಪುತ್ತೂರು, ಬೆಳ್ತಂಗಡಿ
April 3, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

ಬೆಳ್ತಂಗಡಿ ಪಶು ಆಸ್ಪತ್ರೆ ಅಂಬ್ಯುಲೆನ್ಸ್ ಶೆಡ್‌ನಲ್ಲಿ ಮಲಗಿದ್ದ ರೀತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತ ವ್ಯಕ್ತಿ ಕಳಸ ಸಮೀಪದ ಹಿರೆಬೈಲು ನಿವಾಸಿ ಸುಮಾರು 37 ವರ್ಷ ಪ್ರಾಯದ ರವಿ ಎಂದು ಗುರುತಿಸಲಾಗಿದೆ.

ಇವರು ಕಳೆದ ಹಲವು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದು, ಸಂತೆಕಟ್ಟೆ ಸೇರಿದಂತೆ ಪೇಟೆಯಲ್ಲಿ ರಾತ್ರಿ ಹೊತ್ತು ಮಲಗುತ್ತಿದ್ದರು. ವಿಪರೀತ ಕುಡಿತದ ಚಟ ಹೊಂದಿದ್ದ ಇವರು ಕಳೆದ ರಾತ್ರಿ ಪಶು ಆಸ್ಪತ್ರೆಯ ಪಶು ಅಂಬ್ಯುಲೆನ್ಸ್ ನಿಲ್ಲಿಸುವ ಶೆಡ್ಡಿನಲ್ಲಿ ಮಲಗಿದ್ದಲ್ಲೇ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

ಮೃತದೇಹವನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತ ವ್ಯಕ್ತಿಯ ಕೈಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ಅಳವಡಿಸಲಾಗಿದ್ದ ಐವಿ ಡ್ರಿಪ್ ಕಂಡು ಬಂದಿದೆ.

Related posts

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

Suddi Udaya

ಹಾಸನದ ಆಟೋಚಾಲಕನ ಕೊಲೆ ಮಾಡಿ ಶಿರಾಡಿ ಘಾಟ್ ನಲ್ಲಿ ಶವ ಬಿಸಾಕಿದ ಹಂತಕರು: ಧರ್ಮಸ್ಥಳ ನೇತ್ರಾವತಿ‌ ನದಿಯಲ್ಲಿ ಬಟ್ಟೆಗಳನ್ನು ಎಸೆದು ಪರಾರಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕ್ರೀಡಾ ಕೂಟ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ ಗ್ರಾಮದ ಪೇಟೆಯ ಶೌಚಾಲಯದ ಆದೋಗತಿ.. ಉಪಯೋಗಕ್ಕಿಲ್ಲದ ಕಟ್ಟಡ-ತುಕ್ಕು ಹಿಡಿದ ಬಾಗಿಲು…

Suddi Udaya
error: Content is protected !!