April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ “ಪಂಜಿನ ಮೆರವಣಿಗೆ”

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ, ತಾಲೂಕು ಯುವಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ಪಂಜಿನ ಮೆರವಣಿಗೆಯು ಜು.26ರಂದು ಸಂತೆಕಟ್ಟೆ ಅಯ್ಯಪ್ಪ ಮಂದಿರ ಬಳಿಯಿಂದ ಮೂರು ಮಾರ್ಗ ದ ಸ್ಮಾರಕದವರೆಗೆ ನಡೆಯಿತು.

ನಿವೃತ್ತ ಯೋಧ ಶಿವಕುಮಾರ್ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸಿ, ಕಾರ್ಗಿಲ್ ಯುದ್ಧದ ಕ್ಷಣದಲ್ಲಿ ಭಾರತ ಗೆಲುವು ಸಾಧಿಸಿದ ಕ್ಷಣವನ್ನು ನೆನಪಿಸಿದರು.

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಕಾರ್ಗಿಲ್ ವಿಜಯ್ ದಿವಸ್ ೨೫ ವರ್ಷ ಸಂದಿರುವ ಬಗ್ಗೆ ಮಾತಾಡಿ ದೇಶಕ್ಕಾಗಿ ಬಲಿದಾನ ಮಾಡಿದ ವೀರ ಯೋಧರಿಗೆ ನಮನ ಸಲ್ಲಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ರಾಷ್ಟ್ರಭಿಮಾನಿಗಳಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಪ್ರಭಾರಿ ಮಂಡಲ ಪ್ರಧಾನ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಗೌಡ ಕಡಮ್ಮಾಜೆ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ, ಜಿಲ್ಲಾ ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿಧರ ಕಲ್ಮಂಜ, ತಾಲೂಕು ಮಜ್ದೂರ್ ಅಧ್ಯಕ್ಷ, ವಕೀಲ ಉದಯ ಬಿ.ಕೆ. ಬಂದಾರು, ಯುವ ವಕೀಲ ಯತೀಶ್ ಪಣೆಕ್ಕರ, ಯುವಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ರಾಷ್ಟ್ರ ಪ್ರೇಮಿಗಳು ಉಪಸ್ಥಿತರಿದ್ದರು

ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ ಸ್ವಾಗತಿಸಿದರು.

Related posts

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

Suddi Udaya

ಬೆಳ್ತಂಗಡಿಯಲ್ಲಿ ಹೊಸದಾಗಿ “ಲಿಯೋ ಕ್ಲಬ್” ಯುವ ವಿಭಾಗ ಉದ್ಘಾಟನೆ

Suddi Udaya

ಧರ್ಮಸ್ಥಳ ವ್ಯಾಪ್ತಿಯಲ್ಲಿ ಮೂರು ಬೈಕ್ ಮತ್ತು ಒಂದು ಕಾರು ಕಳ್ಳತನ ಪ್ರಕರಣ: ಇಬ್ಬರು ಅಪ್ರಾಪ್ತ ಬಾಲಕರು ಸೇರಿ ಐದು ಜನ ಆರೋಪಿಗಳ ಬಂಧನ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ತಾಲೂಕಿನ ಹಲವು ಕಡೆ ಯೋಗ ದಿನಾಚರಣೆ ಅಂಗವಾಗಿ ಏಕಕಾಲಕ್ಕೆ 20 ತರಬೇತಿ ಕಾರ್ಯಕ್ರಮಗಳು

Suddi Udaya

ಪುದುವೆಟ್ಟು ಮಡ್ಯದಲ್ಲಿ ರಸ್ತೆ ಒತ್ತುವರಿ ತೆರವು ಬಳಿಕ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ಭೇಟಿ ನೀಡಿ ಪರಿಶೀಲನೆ

Suddi Udaya

ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಕ್ಷಿತ್ ಎಸ್ ಬಂಗೇರ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!