37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ & ರೇಂಜರ್ಸ್ ವಿಭಾಗದ ಸಹಯೋಗದಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ ನಡೆಯಿತು.

ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ, ಸಂಸ್ಥೆಯ ಹಿರಿಯ ವಿದ್ಯಾರ್ಥಿ ಫ್ರಾನ್ಸಿಸ್ ಜೆ ವಿದ್ಯಾರ್ಥಿಗಳಿಗೆ ಭಾರತೀಯ ಭೂಸೇನೆಯ ಬಗ್ಗೆ ಮಾಹಿತಿಯನ್ನು ನೀಡಿದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ, ಇದರ ಅಧ್ಯಕ್ಷ ವಿನಯಚಂದ್ರ ಮಾತನಾಡಿ ವಿದ್ಯಾರ್ಥಿಗಳು ಭಾರತ ಮಾತೆಯ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಓ ಎ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ವತಿಯಿಂದ ನಿವೃತ್ತ ಯೋಧರನ್ನು ಸನ್ಮಾನಿಸಲಾಯಿತು.

ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತ ಎನ್ಎಸ್ಎಸ್ ಸ್ವಯಂ ಸೇವಕರಿಗೆ ಏರ್ಪಡಿಸಿದ್ದ ಭಿತ್ತಿ ಪತ್ರಿಕೆ ರಚನೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಶ್ರೀಮತಿ ನಮಿತಾ ಸ್ವಾಗತಿಸಿ, ರೇಂಜರ್ ವಿದ್ಯಾರ್ಥಿನಿ ಕುಮಾರಿ ಸಂಪದ ವಂದಿಸಿದರು. ಎನ್ಎಸ್ಎಸ್ ಸ್ವಯಂಸೇವಕಿ ಕುಮಾರಿ ತುಳಸಿ ಕಾರ್ಯಕ್ರಮ ನಿರೂಪಿಸಿದರು.

Related posts

ನಾಲ್ಕೂರು: ಪೆರ್ಮುಡ- ಅಟ್ಟೆಮಾರು ರಸ್ತೆ ಕಾಂಕ್ರೀಟಿಕರಣ: ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲ

Suddi Udaya

ಕೊಕ್ಕಡ ಗ್ರಾ.ಪಂ. ಸಂಗಮ ಸಂಜೀವಿನಿ ಒಕ್ಕೂಟದಿಂದ ಚಿಕಿತ್ಸಾ ನೆರವು

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆ

Suddi Udaya

ಡಾ. ರೋಹನ್ ದೀಕ್ಷಿತ್ ರೋಟರೀ ಕ್ಲಬ್ ಸದಸ್ಯರಾಗಿ ಪದಗ್ರಹಣ

Suddi Udaya
error: Content is protected !!