24.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ : ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘ ಲಾಯಿಲ ವತಿಯಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮವು ಜು.28 ರಂದು ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಸಂಸದ ಕ್ಯಾ| ಬ್ರಿಜೇಶ್ ಚೌಟ ಮಾತನಾಡಿ ವಿಶ್ವಕರ್ಮ ಸಮಾಜದ ಜೊತೆಗೆ ನಾವೆಲ್ಲರೂ ಇದ್ದೇವೆ. ವಿಶ್ವಕರ್ಮ ಸಮಾಜ ನಮ್ಮ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ದೊಡ್ಡ ಪಾತ್ರ ವಹಿಸಿದೆ ಎಂದರು.

ಸಂಸದರ ನಿಧಿಯಿಂದ ನೂತನ ಸಭಾಭವನಕ್ಕೆ ಅನುದಾನ ಒದಗಿಸುವ ಬಗ್ಗೆ ಮನವಿ ಮತ್ತು ಸಂಘದ ಸಭಾಭವನ ನಿರ್ಮಾಣದ ಜೊತೆಗೆ ಶಿಲ್ಪಕಲಾ ಕೇಂದ್ರ ಮತ್ತು ಪಂಚಕಸುಬುಗಳನ್ನು ಉತ್ತೇಜಿಸಲು ಅಧ್ಯಯನ ಕೇಂದ್ರ ತೆರೆಯಲು ಕೇಂದ್ರ ಸರಕಾರದ ಸಂಬಂಧಪಟ್ಟ ಇಲಾಖೆಗಳಿಂದ ವಿಶೇಷ ಅನುದಾನ ಒದಗಿಸಿಕೊಡುವ ಬಗ್ಗೆ ಹಾಗೂ ಜನಸಾಮಾನ್ಯರ ಅನುಕೂಲಕ್ಕಾಗಿ “ಪಿ.ಎಂ. ವಿಶ್ವಕರ್ಮ” ಯೋಜನೆಯ ತರಬೇತಿ ಕೇಂದ್ರವನ್ನು ತಾಲೂಕಿನಲ್ಲಿ ನಡೆಸುವಂತೆ ಹಾಗೂ ಕಬ್ಬಿಣ ಕೆಲಸದ ಸಂಘದ ವಿವಿಧ ಬೇಡಿಕೆಗಳ ಮನವಿಯನ್ನು ನೂತನ ಸಂಸದ ಕ್ಯಾ | ಬ್ರಿಜೇಶ್ ಚೌಟರಿಗೆ ಮನವಿ ಸಲ್ಲಿಸಲಾಯಿತು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾ ನಾಯಕ ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಶ್ರೀ ವಿಶ್ವಕರ್ಮಾಭ್ಯುದಯ ಸಭಾದ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶ್ರೀ ವಿಶ್ವಕರ್ಮಾಭ್ಯುದಯ ಸಭಾದ ಉಪಾಧ್ಯಕ್ಷ ರಾಘವೇಂದ್ರ ಆಚಾರ್ಯ ನೈಕುಳಿ, ಶಿವಪ್ರಸಾದ್ ಪುರೋಹಿತರು, ನಿವೃತ್ತ ತಹಸೀಲ್ದಾರ್ ರಾಘವೇಂದ್ರ ಆಚಾರ್ಯ ನಿಸರ್ಗ ಬಾರ್ಯ, ಉಮೇಶ್ ಆಚಾರ್ಯ ಕಾನರ್ಪ, ರಮೇಶ್ ಆಚಾರ್ಯ ಮದ್ದಡ್ಕ, ಗುರುಸೇವಾ ಪರಿಷತ್ ಸಂಘಟನಾ ಕಾರ್ಯದರ್ಶಿ ಮಂಜುನಾಥ ಆಚಾರ್ಯ ಅಳದಂಗಡಿ, ಕಬ್ಬಿಣ ಕೆಲಸ ಸಂಘದ ಅಧ್ಯಕ್ಷ ಆನಂದ ಆಚಾರ್ಯ ಮಾಪಲಾಡಿ, ರುಕ್ಮಯ ಆಚಾರ್ಯ ಕನ್ನಾಜೆ, ಶಿಲ್ಪಿ ಜಯಚಂದ್ರ ಆಚಾರ್ಯ, ವಿಶ್ವಕರ್ಮ ಯುವಮಿಲನ ಅಧ್ಯಕ್ಷ ಸುಧಾಕರ್ ಆಚಾರ್ಯ ವೇಣೂರು, ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ಅಧ್ಯಕ್ಷೆ ಉಷಾ ಹರಿಪ್ರಸಾದ್, ಕಾರ್ಯದರ್ಶಿ ಪುಷ್ಪಾ ಗಣೇಶ್ ಆಚಾರ್ಯ, ಆಶಾ ಸತೀಶ್ ಆಚಾರ್ಯ, ಮೀನಾಕ್ಷಿ ಗೋಪಾಲ್ ಆಚಾರ್ಯ, ಪ್ರಸನ್ನ ಅಶೋಕ್ ಆಚಾರ್ಯ ಮತ್ತು ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.ಕಾರ್ಯದರ್ಶಿ ರಾಮ್ ಪ್ರಸಾದ್ ಎನ್ ಎಸ್ ಗುಂಪಲಾಜೆ ನಿರೂಪಿಸಿ ವಂದಿಸಿದರು.

Related posts

ಮಡಂತ್ಯಾರು: ರಚನಾ ಸಿಲ್ಕ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

Suddi Udaya
error: Content is protected !!