September 6, 2026
ಅಪರಾಧ ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಹಿಟ್ ಅಂಡ್ ರನ್ ಪ್ರಕರಣ ದಲ್ಲಿ ಬಾಲಕಿಗೆ ಸಾವು ಬೋಲೆರೋ ಚಾಲಕ ಪ್ರಶಾಂತ್ ಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ :ಜು.27ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಉಜಿರೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಸೀಟು ಕಾಡು ಎಂಬಲ್ಲಿ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕುಡೆಂಚಿ ನಿವಾಸಿ ಗುರುಪ್ರಸಾದ್ ಗೋಖಲೆಯವರು ತನ್ನ ಮಗಳಾದ 5 ನೇ ತರಗತಿ ವಿದ್ಯಾರ್ಥಿನಿ ಅನರ್ಘ್ಯ(11ವ)ಳನ್ನು ಕುಳ್ಳಿರಿಸಿಕೊಂಡು ಮುಂಡಾಜೆ ಕಡೆ ಹೋಗುತ್ತಿದ್ದಾಗ ಹಿಂಬದಿಯಿಂದ ಅಜಾಗರೂಕತೆಯಿಂದ ಮದ್ಯ ಸೇವಿಸಿ ಬೊಲೆರೋ ವಾಹನ ಚಲಾಯಿಸಿಕೊಂಡು ಬರುತ್ತಿದ್ದ ಚಾಲಕನು ಮುಂದಿದ್ದ ಬೈಕ್‌ಗೆ ಡಿಕ್ಕಿ ಹೊಡೆದು ಬೈಕ್ ಸಮೇತ ಕೆಲ 30 ಮೀಟರ್ ದೂರ ಎಳೆದುಕೊಂಡು ಹೋಗಿ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದು, ಸ್ಥಳೀಯರು ಅರ್ಥ ಕಿ.ಮೀ. ಸಾಗುವಷ್ಟರಲ್ಲಿ ಬೊಲೆರೋ ವಾಹನವನ್ನು ತಡೆದು ನಿಲ್ಲಿಸುವಲ್ಲಿ ಸಾರ್ವಜನಿಕರು ಯಶಸ್ವಿಯಾಗಿದ್ದಾರೆ.

ಘಟನೆಯಲ್ಲಿ ಬೈಕಿನಲ್ಲಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಬಾಲಕಿಯ ತಂದೆ ಗುರುಪ್ರಸಾದ್ ಗೋಖಲೆಗೆ ಗಂಭೀರ ಗಾಯವಾಗಿದ್ದು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಗೆ ಸಂಬಂಧಿಸಿ ಬೊಲೆರೊ ಚಾಲಕ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ನಿವಾಸಿ ಪ್ರಶಾಂತ್ (31ವ) ವಿರುದ್ಧ ಜು.28 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 105,125A BNS,134A&B, IMV Act ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

ಬೊಲೆರೊ ಚಾಲಕ ಆರೋಪಿ ಪ್ರಶಾಂತ್ ನನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು ಜು.28 ರಂದು ಸಂಜೆ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಧರ್ಮಸ್ಥಳ ಪೊಲೀಸರು ಹಾಜರುಪಡಿಸಿದ್ದಾರೆ. ಈ ವೇಳೆ ಬೆಳ್ತಂಗಡಿ ನ್ಯಾಯಾಧೀಶರು ಬೊಲೆರೋ ಚಾಲಕ ಪ್ರಶಾಂತ್ ಗೆ ನ್ಯಾಯಾಂಗ ಬಂಧನವನ್ನು ವಿಧಿಸಿದ್ದಾರೆ.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನೂತನ ಅನ್ನಛತ್ರ ಉದ್ಘಾಟನೆ

Suddi Udaya

ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ ಎಸ್.ಐ.ಟಿ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸತತ ಹತ್ತನೇ ಬಾರಿಗೆ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿಗೆ ಸಾಧನ ಪ್ರಶಸ್ತಿ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ ಹಲವರಿಗೆ ಗಾಯ

Suddi Udaya

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

Suddi Udaya
error: Content is protected !!