22.2 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಸಹಿಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಉಜಿರೆ ಹಳೆಪೇಟೆ ಸ.ಹಿ.ಪ್ರಾ ಶಾಲೆಗೆ ಗ್ರೀನ್ ಬೋರ್ಡ್ ಗಳನ್ನು ಜು.29ರಂದು ಹಸ್ತಾಂತರಿಸಲಾಯಿತು.


ಗ್ರೀನ್ ಬೋರ್ಡ್ ಹಸ್ತಾಂತರಿಸಿ ಮಾತನಾಡಿದ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ “ಉತ್ತಮ ವಾತಾವರಣ ಇರುವ ಶಾಲೆಗಳಲ್ಲಿ ಮಕ್ಕಳ ಕಲಿಕೆಯ ಉತ್ಸಾಹ ಹೆಚ್ಚಿರುತ್ತದೆ. ಇಂದಿನ ದಿನಗಳಲ್ಲಿ ಅಂಕಗಳೇ ಮಾನದಂಡವಲ್ಲ. ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ತಕ್ಕ ಶಿಕ್ಷಣ ನೀಡಿ ಅವರ ಭವಿಷ್ಯವನ್ನು ನಿರ್ಮಿಸಲು ಸಾಧ್ಯವಿದೆ” ಎಂದರು.


ಶಾಲೆಯ ಅಭಿವೃದ್ಧಿಗೆ ಮುತುವರ್ಜಿ ವಹಿಸಿದ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ ಕುಮಾರ್ ಮಾತನಾಡಿ “ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಲ್ಲಿ ಪೋಷಕರ ಪಾತ್ರವು ಮಹತ್ವದ್ದು.ಪೋಷಕರು ಶಾಲೆಗಳಿಗೆ ಆಗಾಗ ಭೇಟಿ ನೀಡಿ ಅಲ್ಲಿನ ಕುಂದು ಕೊರತೆಗಳಿಗೆ ಸ್ಪಂದಿಸಬೇಕು. ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಕೈಗಳು ಒಟ್ಟಾದರೆ ತ್ವರಿತ ಪ್ರಗತಿ ಸಾಧ್ಯ.ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಲೆಗಳನ್ನು ಅಭಿವೃದ್ಧಿಪಡಿಸುವ ಕುರಿತು ಯೋಜನೆ ರೂಪಿಸಲಾಗಿದೆ” ಎಂದರು.


ಇಲಾಖೆಯ ವತಿಯಿಂದ ಮಕ್ಕಳಿಗೆ ಶೂ-ಸಾಕ್ಸ್ ವಿತರಿಸಿ ಮಾತನಾಡಿದ ಬೆಳ್ತಂಗಡಿ ಬಿಇಒ ತಾರಕೇಸರಿ “ಶಾಲಾ ಚಟುವಟಿಕೆಗಳಿಗೆ ಗ್ರೀನ್ ಬೋರ್ಡ್ ಗಳು ಅತ್ಯಗತ್ಯವಾಗಿದ್ದು ತಾಲೂಕಿನ 179 ಸರಕಾರಿ ಶಾಲೆಗಳ ಪೈಕಿ ಬೆರಳೆಣಿಕೆಯ ಶಾಲೆಗಳಲ್ಲಿ ಮಾತ್ರ ಈ ಸೌಲಭ್ಯವಿದೆ. ಮಕ್ಕಳಿಗೆ ಸಂಸ್ಕೃತಿಯೊಂದಿಗೆ ವಿದ್ಯೆ ನೀಡಬೇಕು. ಉತ್ತಮ ಮಟ್ಟದ ಪ್ರಾಥಮಿಕ ಶಾಲಾ ಶಿಕ್ಷಣ ಮಕ್ಕಳ ಶಿಕ್ಷಣಕ್ಕೆ ಅಡಿಪಾಯ ಹಾಕುವುದರ ಜತೆ ಪ್ರೌಢಶಾಲೆಗಳಲ್ಲಿ ಹೆಚ್ಚಿನ ಫಲಿತಾಂಶಕ್ಕೆ ಕಾರಣವಾಗುತ್ತದೆ” ಎಂದರು.
ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಅಧ್ಯಕ್ಷತೆ ವಹಿಸಿದ್ದರು.
ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾಕಿರಣ ಕಾರಂತ ಶುಭ ಹಾರೈಸಿದರು.
ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಆರತಿ, ಮುಖ್ಯ ಶಿಕ್ಷಕಿ ಸಾವಿತ್ರಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ ರಾವ್, ಮಾಜಿ ಕಾರ್ಯದರ್ಶಿ ವಿದ್ಯಾ ಕುಮಾರ್ ಕಾಂಚೋಡು ಉಪಸ್ಥಿತರಿದ್ದರು.
ಪತ್ರಕರ್ತರ ಸಂಘದ ಜತೆ ಕಾರ್ಯದರ್ಶಿ ಮನೋಹರ ಬಳಂಜ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಪತ್ರಕರ್ತರ ಸಂಘದ ಉಪಾಧ್ಯಕ್ಷ ಶಿಬಿ ಧರ್ಮಸ್ಥಳ, ಖಜಾಂಚಿ ಪುಷ್ಪರಾಜ ಶೆಟ್ಟಿ, ಸದಸ್ಯರಾದ ಬಿ.ಎಸ್. ಕುಲಾಲ್, ಅರವಿಂದ ಹೆಬ್ಬಾರ್, ಸಂತೋಷ್ ಕೋಟ್ಯಾನ್, ಅಚುಶ್ರೀ ಬಾಂಗೇರು, ತುಕಾರಾಂ ಬಿ. ಭಾಗವಹಿಸಿದ್ದರು.

Related posts

ತೆಂಕಕಾರಂದೂರು ಸಂತಾನ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಅಪಾಯದಂಚಿನಲ್ಲಿರುವ ತೋಟತ್ತಾಡಿಯ ಸೇತುವೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ಮೈಸೂರು ಚಲೋ ಪ್ರತಿಭಟನಾ ಪಾದಯಾತ್ರೆಯ ಕುರಿತು ಪಕ್ಷದ ಪದಾಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರಿಂದ ಸಿದ್ಧತಾ ಸಭೆ

Suddi Udaya

ಫೆ. 28- 29: ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಸಿನಮಕ್ಕಿ: ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

Suddi Udaya
error: Content is protected !!