32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಕುಕ್ಕೇಡಿ : ಶ್ರೀ ಶಾರದಾಂಭ ಭಜನಾ ಮಂಡಳಿ ಶ್ರೀ ಶಾರದನಗರ ಬುಳೆಕ್ಕರ ಕುಕ್ಕೇಡಿ ಇದರ ವಾರ್ಷಿಕ ಮಹಾಸಭೆಯು ಶ್ರೀ ಶಾರದಾಂಭ ಭಜನಾ ಮಂದಿರದ ತಿಮ್ಮಯ್ಯ ಬಲ್ಲಾಳ್ ಸಭಾಭವನದಲ್ಲಿ ಇತ್ತೀಚೆಗೆ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ಮಂಡಳಿಯ ಅಧ್ಯಕ್ಷ ಪ್ರಕಾಶ್ ಪೂಜಾರಿಯವರು ವಹಿಸಿದರು.

ವೇದಿಕೆಯಲ್ಲಿ ಕುಕ್ಕೇಡಿ ಗ್ರಾಮ ಪಂಚಾಯತ್ ಸದಸ್ಯ ಗೋಪಾಲ್ ಶೆಟ್ಟಿ , ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಶಕುಂತಲಾ ಕೃಷ್ಣಪ್ಪ ದೇವಾಡಿಗ ಉಪಸ್ಥಿತರಿದ್ದರು.

ಈ ವೇಳೆ ಮುಂದಿನ ಸಾಲಿನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಗೌರವಾಧ್ಯಕ್ಷರಾಗಿ ರಾಜೇಶ್ ಜೈನ್ ಬುಳೆಕ್ಕರ್ ಬೀಡು, ಅಧ್ಯಕ್ಷರಾಗಿ ಹರೀಶ್ ಬಂಗೇರ, ಉಪಾಧ್ಯಕ್ಷರಾಗಿ ಚಂದ್ರಹಾಸ ಪೂಜಾರಿ, ನಿತಿನ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಜಿ., ಕಾರ್ಯದರ್ಶಿಯಾಗಿ ರಕ್ಷಿತ್ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ನಿತೇಶ್ ಮಂಗತ್ಯಾರ್ , ಕೋಶಾಧಿಕಾರಿಯಾಗಿ ಸುದೀಪ್ ಕುಮಾರ್, ಭಜನಾ ಸಂಚಾಲಕರಾಗಿ ಗಣೇಶ್ ಪೂಜಾರಿ, ಲೆಕ್ಕಪರಿಶೋಧಕರಾಗಿ ಸತೀಶ್ ಬಂಗೇರ , ಕಾರ್ಯಧ್ಯಕ್ಷರಾಗಿ ದಯಾನಂದ ಶೆಟ್ಟಿ, ಗೌರವ ಸಲಹೆಗಾರರಾಗಿ ಗೋಪಾಲ ಶೆಟ್ಟಿ, ವಿಶ್ವನಾಥ ದೇವಾಡಿಗ, ಪ್ರಕಾಶ್ ಪೂಜಾರಿ, ಸುಂದರ ದೇವಾಡಿಗ, ನಾರಾಯಣ ನಾಯ್ಕ, ಹಾಗೂ ಇತರ ಮೂವತ್ತು ಸದಸ್ಯರನ್ನು ಆಯ್ಕೆಮಾಡಲಾಯಿತು.

ಪ್ರವೀಣ್ ಪೂಜಾರಿ ಸ್ವಾಗತಿಸಿದರು. ಜಗದೀಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ನವೀನ್ ಜಿ. ಧನ್ಯವಾದವಿತ್ತರು.

Related posts

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಐಸಿಎಸ್‌ಇ ಮಾನ್ಯತೆ ಘೋಷಣೆ ಮತ್ತು ಮಕ್ಕಳ ಪ್ರತಿಭಾ ಸಂಗಮ ಧ್ವನಿ -2023 ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya

ಉಜಿರೆ: ಮಿತ್ರ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!