30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಕೀರ್ತಿಶೇಷ ಪ್ರೊ. ಎನ್. ಜಿ. ಪಟವರ್ಧನ್ ಅವರ ಸಾಹಿತ್ಯ ಮತ್ತು ವ್ಯಕ್ತಿತ್ವ ವಿಚಾರ ಸಂಕಿರಣ


ಉಜಿರೆ: ಕೀರ್ತಿಶೇಷ ಪ್ರೊ. ಎನ್.ಜಿ. ಪಟವರ್ಧನ್ ಸ್ಮಾರಕ ದತ್ತಿನಿಧಿಯೊಂದನ್ನು ಎಸ್.ಡಿ.ಎಂ. ಕಾಲೇಜಿನಲ್ಲಿ ಸ್ಥಾಪಿಸಿ ಪ್ರತಿವರ್ಷ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕಾಲೇಜಿನ ಕನ್ನಡ ವಿಭಾಗದ ಸಹಭಾಗಿತ್ವದಲ್ಲಿ ವರ್ಷಕ್ಕೊಂದು ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಆಯುರ್ವೇದ ಪ್ರಾಧ್ಯಾಪಕರಾದ ಹಾಗೂ ಪ್ರೊ. ಎನ್. ಜಿ. ಪಟವರ್ಧನರ ಪುತ್ರ ಡಾ. ಕಿಶೋರ್ ಪಟವರ್ಧನ್ ಹೇಳಿದರು.


ಅವರು ಜು. 29ರಂದು ಉಜಿರೆಯಲ್ಲಿ ಎಸ್.ಡಿ.ಎಂ. ಕಾಲೇಜಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಕಾಲೇಜಿನ ಕನ್ನಡ ವಿಭಾಗದ ಜಂಟಿ ಆಶ್ರಯದಲ್ಲಿ ಆಯೋಜಿಸಿದ ಎನ್.ಜಿ. ಪಟವರ್ಧನ್ ಅವರ ಸಾಹಿತ್ಯ ಮತ್ತು ವ್ಯಕ್ತಿತ್ವ ವಿಚಾರಸಂಕಿರಣದಲ್ಲಿ ಮಾತನಾಡಿದರು.


ಬದುಕಿನ ಎಲ್ಲಾ ಸವಾಲುಗಳನ್ನು, ಸಮಸ್ಯೆಗಳನ್ನು ಧನಾತ್ಮಕವಾಗಿ ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಸ್ವೀಕರಿಸಿದ ದಿವಗತ ಎನ್. ಜಿ. ಪಟವರ್ಧನ್ ಭಾವಪ್ರಧಾನವಾದ ಚುಟುಕುಗಳು, ಹನಿಗವನಗಳು, ಲಲಿತಪ್ರಬಂಧ ಮತ್ತು ಕಾದಂಬರಿಗಳನ್ನು ಬರೆದಿದ್ದಾರೆ. ಸದಾ ಹಸನ್ಮುಖಿಯಾಗಿ ಭಾವಜೀವಿಯಾಗಿದ್ದ ಅವರ ಎಲ್ಲಾ ಕೃತಿಗಳು ಸರಳವಾಗಿದ್ದು ಸುಲಭಗ್ರಾಹ್ಯವಾಗಿವೆ ಎಂದರು.


ವಿಚಾರಸಂಕಿರಣ ಉದ್ಘಾಟಿಸಿದ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಮಾತನಾಡಿ, ಆಕರ್ಷಕ ವ್ಯಕ್ತಿತ್ವ ಹೊಂದಿದ್ದ ಪ್ರೊ. ಪಟವರ್ಧನ್ ಅಜಾತ ಶತ್ರುವಾಗಿದ್ದು, ಸಹೃದಯ ಸಾಹಿತಿ, ಉತ್ತಮ ಗಾಯಕರಾಗಿ, ಕಾಲೇಜಿನಲ್ಲಿ ಕನ್ನಡ ವಿಭಾಗವನ್ನು ಕಟ್ಟಿ ಬೆಳೆಸುವಲ್ಲಿ ಉತ್ತಮ ಸೇವೆ ನೀಡಿದ್ದರು. ಬಹುಮುಖ ಪ್ರತಿಭೆಯನ್ನು ಹೊಂದಿದ್ದ ಅವರು ಕ್ರೀಡಾಪಟುವಾಗಿಯೂ, ಉತ್ತಮ ಕೃಷಿಕರಾಗಿಯೂ ಚಿರಪರಿಚಿತರಾಗಿದ್ದರು ಎಂದು ಅವರ ಸೇವೆ, ಸಾಧನೆಯನ್ನು ಸ್ಮರಿಸಿದರು.


ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಕುಮಾರ ಹೆಗ್ಡೆ  ಮಾತನಾಡಿ, ಸೃಜನಶೀಲ ಸಾಹಿತಿಯಾಗಿದ್ದ ಪ್ರೊ. ಎನ್. ಜಿ. ಪಟವರ್ಧನ್ ಆದರ್ಶ ಅಧ್ಯಾಪಕರಾಗಿ, ಸಂತೃಪ್ತ, ಸಾರ್ಥಕ ಜೀವನ ನಡೆಸಿದ್ದಾರೆ. ಅನಾರೋಗ್ಯದ ಸಂದರ್ಭ ಉತ್ತಮ ಶುಶ್ರೂಷೆ ನೀಡಿ ಅವರ ಸೇವೆ ಮಾಡಿದ ಪತ್ನಿ ಮತ್ತು ಮಕ್ಕಳನ್ನು ಅಭಿನಂದಿಸಿದರು.
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಶ್ರೀನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿಜಯಲಕ್ಷ್ಮೀ ಪಟವರ್ಧನ್ ಮತ್ತು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಕಾರ್ಯದರ್ಶಿ ರಾಜೇಶ್ವರಿ ಉಪಸ್ಥಿತರಿದ್ದರು.
ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಬೋಜಮ್ಮ ಸ್ವಾಗತಿಸಿದರು. ಬೆಳ್ತಂಗಡಿ ತಾಲ್ಲೂಕು ಕನ್ನಡ ಸಾಹಿತ್ಯಪರಿಷತ್ ಘಟಕದ ಅಧ್ಯಕ್ಷ ಯದುಪತಿ ಗೌಡ ಧನ್ಯವಾದವಿತ್ತರು.
ನಿವೃತ್ತ ಪ್ರಾಂಶುಪಾಲ ಪ್ರೊ. ಟಿ. ಕೃಷ್ಣಮೂರ್ತಿ ಪ್ರೊ. ಎನ್. ಜಿ. ಪಟವರ್ಧನರ ವೃತ್ತಿ ಮತ್ತು ವ್ಯಕ್ತಿತ್ವದ ಬಗ್ಗೆ ಹಾಗೂ ಕನ್ನಡ ಉಪನ್ಯಾಕ ಪ್ರೊ. ದಿವಾಕರ ಅವರು ಪಟವರ್ಧನರ ಸಾಹಿತ್ಯ, ಸಾಧನೆ ಬಗ್ಯೆ ಉಪನ್ಯಾಸ ನೀಡಿದರು.

Related posts

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

Suddi Udaya

ಎ.9: ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಜನಕ್ರೋಶ ಯಾತ್ರೆ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

Suddi Udaya

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!