32.6 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ 2024-25ನೇ ಸಾಲಿನ ‘ಐ.ಟಿ. ಕ್ಲಬ್’ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಇಂದು (ಜು.29) ಜರಗಿತು.

ಉದ್ಘಾಟನೆ ನೆರವೇರಿಸಿ ಮಾತನಾಡಿದ ಉಜಿರೆಯ ಪ್ರಕಾಶ ಎಲೆಕ್ಟ್ರಾನಿಕ್ಸ್ ಇದರ ಪಾರ್ಟ್ನರ್ ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸುಮನಾ ಶೆಟ್ಟಿ, “ತಂತ್ರಜ್ಞಾನ ಬಹಳಷ್ಟು ಮುಂದುವರಿದಿದೆ. ನಾವು ಅದರ ಜೊತೆ ಸಾಗಬೇಕು ಹೊರತು ಹಿಂದುಳಿಯಬಾರದು” ಎಂದರು.

“ತಂತ್ರಜ್ಞಾನ ಕ್ಷೇತ್ರ ಜನರಿಗೆ ಸದಾ ಪೂರಕವಾಗಿ ಇರಬೇಕು. ಸಮಾಜಕ್ಕೆ ನಮ್ಮ ಕೈಲಾದಷ್ಟು ಕೊಡುಗೆ ನೀಡುವುದರ ಕಡೆಗೆ ನಮ್ಮ ಗಮನ ಇರಲಿ” ಎಂದು ಅವರು ಕಿವಿಮಾತು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಮಾತನಾಡಿ, ಆಧುನಿಕತೆಯ ಯುಗದಲ್ಲಿ ತಂತ್ರಜ್ಞಾನದ ಕ್ಷೇತ್ರದಲ್ಲಿ ಸ್ಪರ್ಧೆ ಹೆಚ್ಚಾಗಿದೆ. ವಿದ್ಯಾರ್ಥಿ ಹಂತದಲ್ಲಿ ಉತ್ತಮ ಹಾಗೂ ನಿರ್ದಿಷ್ಟ ಗುರಿಯನ್ನು ಹೊಂದಿರಬೇಕು. ಕಾಲೇಜಿನಲ್ಲಿ ಎದುರಾಗುವ ಎಲ್ಲ ಸವಾಲುಗಳನ್ನು ಅವಕಾಶದಂತೆ ಸ್ವೀಕರಿಸಿ ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಐ.ಟಿ. ಕ್ಲಬ್ ಸಂಯೋಜಕರಿಗೆ ಬ್ಯಾಡ್ಜ್ ನೀಡಿ ಅಭಿನಂದಿಸಲಾಯಿತು. ದ್ವಿತೀಯ ಬಿಸಿಎ ವಿದ್ಯಾರ್ಥಿಗಳು ತಯಾರಿಸಿದ ಭಿತ್ತಿಪತ್ರ ಅನಾವರಣಗೊಳಿಸಲಾಯಿತು. ವಿಭಾಗದ ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು.

ವಿಭಾಗ ಮುಖ್ಯಸ್ಥ ಶೈಲೇಶ್ ಕುಮಾರ್ ಹಾಗೂ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಮೋನಲ್ ಸ್ವಾಗತಿಸಿದರು. ಆಶಾ ಹಾಗೂ ತಂಡ ಪ್ರಾರ್ಥಿಸಿದರು. ಐ. ಟಿ. ಕ್ಲಬ್ ಕಾರ್ಯದರ್ಶಿ ಅಂಶಿತಾ ವಂದಿಸಿದರು. ತ್ರಿಶಾ ಕಾರ್ಯಕ್ರಮ ನಿರೂಪಿಸಿದರು.

Related posts

ಗಣೇಶೋತ್ಸವದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ನಗದು ಬಹುಮಾನದಲ್ಲಿ ಬಳಂಜ ಶಾಲೆಯ ಶಾಲಾ ಸಭಾಂಗಣದ ಶಾರದಾ ಕಲಾಮಂದಿರಕ್ಕೆ ಎರಡು ಫೋಕಸ್ ಲೈಟುಗಳ ಕೊಡುಗೆ ನೀಡಿದ ವಿದ್ಯಾರ್ಥಿಗಳು

Suddi Udaya

ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ಸದಾಶಿವ ಊರ, ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕೊಯ್ಯೂರು ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ: ಮನೋಜ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

Suddi Udaya

ಸಂಜೀವಿನಿ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸರಕಾರದಿಂದ ಸಮ್ಮತಿ

Suddi Udaya
error: Content is protected !!