25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ – 2024 ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ, ಸುದ್ಧಿ ಉದಯ ವಾರ ಪತ್ರಿಕೆಯ ಉಪಸಂಪಾದಕರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ ಅವರಿಗೆ ವೃತ್ತಿ ಮತ್ತು ಸಮಾಜಸೇವಾ ಕಾರ್ಯಸಾಧನೆಗಾಗಿ ಸಾಧನಾಶ್ರೀ- 2024 ಪ್ರಶಸ್ತಿ ನೀಡಿ ಜು.28 ರಂದು ಗೌರವಿಸಲಾಯಿತು.

2011 ರಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಸಂಸ್ಥೆಗೆ ಸದಸ್ಯರಾಗಿ ಸೇರ್ಪಡೆಗೊಂಡು ನಂತರ ಕೋಶಾಧಿಕಾರಿಯಾಗಿ, ಉಪಾಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ, ಜೆಸಿ ಸಪ್ತಾಹದ ಕಾರ್ಯಕ್ರಮ ಸಂಯೋಜಕರಾಗಿ ವಿವಿಧ ಹುದ್ದೆಗಳನ್ನು ಅಲಂಕರಿಸಿ 2017 ರಲ್ಲಿ ಘಟಕಾಧ್ಯಕ್ಷರಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಂಡು, ಹಲವಾರು ಸಂಘ ಸಂಸ್ಥೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದಾರೆ.

ವೃತ್ತಿ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಅಪ್ರತಿಮ ಸೇವೆಯನ್ನು ಗುರುತಿಸಿ, ಜೆಸಿಐ ವಲಯ 15ರ ವ್ಯವಹಾರ ಸಮ್ಮೇಳನ ‘ವೈಭವ’ ಸಾಧಕ ಜೇಸಿಗಳ ಸಮಾಗಮದಲ್ಲಿ ಸಾಧನಾಶ್ರೀ ಪುರಸ್ಕಾರ ನೀಡಿ ಗೌರವಿಸಲಾಗಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

Suddi Udaya

ಉಜಿರೆ : ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ‘ಕೌಶಲ್ಯಾಭಿವೃದ್ಧಿ ಕಾರ್ಯಾಗಾರ’

Suddi Udaya

ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

Suddi Udaya

ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!