September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

ಕನ್ಯಾಡಿ : ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮುದ್ದೇನಹಳ್ಳಿ ಚಿಕ್ಕಬಳ್ಳಾಪುರ ಜಿಲ್ಲೆ ಇವರು ಕರ್ನಾಟಕ ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ “ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ 2024” ಗಾಗಿ ಅರ್ಜಿಗಳನ್ನು ಆಹ್ವಾನಿಸಿದ್ದರು. ಅದರಲ್ಲಿ ಆಯ್ದ 100 ಶಾಲೆಗಳಿಗೆ ಮಾತ್ರ ಈ ಪ್ರಶಸ್ತಿ ನೀಡುವುದಾಗಿ ತಿಳಿಸಿದರು.

ಅದರಲ್ಲಿ ಕನ್ಯಾಡಿ – 2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ “ಆಯ್ಕೆ ಆಗಿರುವುದು ಬೆಳ್ತಂಗಡಿ ತಾಲೂಕಿಗೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ.

ಈ ಪ್ರಶಸ್ತಿಯನ್ನು ಶಾಲೆಯ ಹಿರಿಯ ಶಿಕ್ಷಕಿ ಶಾರದ ಜಿ ಇವರು ಜು. 27 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ,ಸತ್ಯಸಾಯಿ ಗ್ರಾಮದಲ್ಲಿ ಜರುಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿ ಸದ್ಗುರು ಮಧುಸೂದನ ಸಾಯಿ ಅವರ ದಿವ್ಯ ಸಾನಿಧ್ಯದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು.
ಪ್ರಶಸ್ತಿಯು ರೂಪಾಯಿ ಹತ್ತು ಸಾವಿರ ನಗದು ಪುರಸ್ಕಾರವನ್ನು ಹೊಂದಿದೆ.

Related posts

ಮಂಗಳೂರು – ಧರ್ಮಸ್ಥಳ: ರಾಜಹಂಸ ಬಸ್ ಸೇವೆ ಪ್ರಾರಂಭ

Suddi Udaya

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಎಸ್ ಡಿ ಯಂ ಆಂ.ಮಾ. ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ನಡೆಯುವ ಕರಾಟೆ ತರಬೇತಿ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಜಾಮೀನು ಸಿಕ್ಕರೂ ಬಿಡುಗಡೆಯಾಗದ ಚಿನ್ನಯ್ಯ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆ – ಮಾಹಿತಿ ಶಿಬಿರ

Suddi Udaya

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya
error: Content is protected !!