September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ.ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬೃಹತ್ ಪ್ರತಿಭಟನೆ

ಬೆಳ್ತಂಗಡಿ : ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ದರೋಡೆ ಹಾಗೂ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬೃಹತ್ ಪ್ರತಿಭಟನೆ ಜು.30ರಂದು ಬೆಳ್ತಂಗಡಿ ಮಿನಿ ವಿಧಾನಸೌಧದ ಮುಂಭಾಗ ನಡೆಯಿತು.

ಈ ವೇಳೆ ಮಾತನಾಡಿದ ಶಾಸಕ ಹರೀಶ್ ಪೂಂಜ ಮೊನ್ನೆ ನಡೆದಂತಹ ಘಟನೆಯಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯನ್ನು ಮಾಡುವಂತಂಹ ಗೂಂಡಾಗಳನ್ನು ಕಾಂಗ್ರೆಸ್ ಸರಕಾರ ರಕ್ಷಣೆಕೊಡುತ್ತಿದ್ದು ಈ ರಕ್ಷಣೆ ವಿರುದ್ಧ ಹೋರಾಟವಾಗಿದೆ. ಈ ಘಟನೆಯಲ್ಲಿ ಕ್ರಿಮಿನಲ್ ಮೊಕದ್ದಮೆ ಹೊಂದಿದ್ದವರೆ ಭಾಗಿಯಾಗಿದ್ದು ತಾಲೂಕಿನಲ್ಲಿ ಇಂತಹ ಗೂಂಡಾಗಳಿಗೆ ಸರಿಯಾದ ಶಿಕ್ಷೆಯನ್ನು ಕೊಡಿಸುವಂತಹ ಕೆಲಸ ಪೊಲೀಸ್ ಇಲಾಖೆ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಮಂಡಲ ಪ್ರಧಾನ ಕಾರ್ಯದರ್ಶಿಯಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ಜಿಲ್ಲಾ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾಶ್ರೀನಿವಾಸ , ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಮುಂಡಾಜೆ, ಉಜಿರೆ ಗ್ರಾ.ಪಂ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷೆ ರತ್ನಾವತಿ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು.. ಸುಂದರ ಹೆಗ್ಡೆ ವೇಣೂರು. ಶಕ್ತಿ ಕೇಂದ್ರದ ಪದಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಶ್ರೀ ಸೌತಡ್ಕ ಕ್ಷೇತ್ರದಲ್ಲಿ ಇಜ್ಜಾವು ಮನೆಯವರಿಂದ ಸೇವಾರ್ಥ ಮೂಡಪ್ಪ ಸೇವೆ

Suddi Udaya

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರದಲ್ಲಿ ಸಾನಿಧ್ಯ ದೈವಗಳ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವ

Suddi Udaya

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya
error: Content is protected !!