ಕೊಕ್ಕಡ ಗ್ರಾಮ ಪಂಚಾಯತ್ ನ ತುರ್ತು ಸಭೆಯು ಗ್ರಾ.ಪಂ ಅಧ್ಯಕ್ಷೆ ಬೇಬಿಯವರ ಅಧ್ಯಕ್ಷತೆಯಲ್ಲಿ ಜು.31ರಂದು ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಸಭೆಯಲ್ಲಿ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ಹಣ ಎಗರಿಸುವುದನ್ನು ತಡೆಯುವ ಸಲುವಾಗಿ ಬ್ಯಾಂಕ್‌ನ ಪ್ರತಿನಿಧಿಗಳೊಂದಿಗೆ ಚರ್ಚಿಸಲಾಯಿತು. ಬ್ಯಾಂಕ್ ನ ಗ್ರಾಹಕರಿಗೆ ಗ್ರಾಮಸ್ಥರಿಗೆ ಈ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆನರಾ ಬ್ಯಾಂಕ್ ಹಾಗೂ ಗ್ರಾ.ಪಂ. ಕರಪತ್ರ ಮುದ್ರಿಸಿ ಹಂಚುವುದಾಗಿ ತಿಳಿಸಲಾಯಿತು. ಮುಂದೇ ಹಣ ಕಳಕೊಂಡ ಗ್ರಾಹಕರು ಕೂಡಲೇ ಸಂಬಂಧಪಟ್ಟ ಬ್ಯಾಂಕ್ , ಬೀಟ್ ಪೊಲೀಸರಿಗೆ ಕಂಪ್ಲೇಟ್ ಮಾಡುವುದು ನಂತರ ಪಂಚಾಯತ್ ಗೆ ತಿಳಿಸಬೇಕೆಂದು ಸಭೆಯಲ್ಲಿ ವ್ಯಕ್ತವಾಯಿತು.
ಈ ವೇಳೆ ಕೊಕ್ಕಡ ಕೆನರಾ ಬ್ಯಾಂಕ್ ಮೇನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಗಣೇಶ್, ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಕೊಕ್ಕಡ ಶಾಖಾ ಮಾನೇಜರ್, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಕೊಕ್ಕಡ ಶಾಖಾ ಮಾನೇಜರ್, ಕೊಕ್ಕಡ ಎಸ್.ಸಿ.ಡಿ.ಸಿಸಿ ಬ್ಯಾಂಕ್ ಮೇನೇಜರ್ , ಬೀಟ್ ಪೊಲೀಸ್ , ಅಲ್ಲದೇ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ , ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ನಿಕಟಪೂರ್ವಾಧ್ಯಕ್ಷ ಯೋಗೀಶ್ ಆಲಂಬಿಲ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ಧನ್ಯವಾದವಿತ್ತರು.