25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಹಾವೇರಿ ರಾಣಿ ಬೆನ್ನೂರಿನಲ್ಲಿ ಕಾರ್ಯಕ್ರಮ

ಬಳಂಜ: ಕುಣಿತಾ ಭಜನೆಯಲ್ಲಿ ರಾಜ್ಯವ್ಯಾಪ್ತಿ ಪ್ರಸಿದ್ಧಿ ಪಡೆದಿರುವಂತಹ ವಿವಿಧ ಭಜನೆ ಮಂಡಳಿಗಳಲ್ಲಿ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಕೂಡ ಒಂದು. ಹರೀಶ್ ವೈ ಚಂದ್ರಮ‌ ಬಳಂಜ ಇವರ ಸಂಚಾಲಕತ್ವದಲ್ಲಿ ಮುನ್ನಡೆಯುತ್ತಿರುವ ತಂಡ ಧಾರ್ಮಿಕತೆಯ ಭಕ್ತಿಯ ಹೆಜ್ಜೆಯ ಮೂಲಕ ಹೆಸರು ಗಳಿಸಿ ತನ್ನ ಭಕ್ತಿ ಪಯಣದ 230 ನೇ ಕಾರ್ಯಕ್ರಮವನ್ನು ಹಾವೇರಿ ಜಿಲ್ಲೆಯ ಶ್ರೀ ಶಿರಡಿ ಸಾಯಿ ಬಾಬಾ ದೇವಸ್ಥಾನ ರಾಣೆಬೆನ್ನೂರು ಸಾಯಿ ಬಾಬಾ ಉತ್ಸವ ಮೂರ್ತಿಯ ಗುರುಪೂರ್ಣಿಮೆಯ ಕುಣಿತ ಭಜನೆ ಮೆರವಣಿಗೆಯ ಕಾರ್ಯಕ್ರಮವನ್ನು ನೀಡಿ ಎಲ್ಲರ ಮೆಚ್ಚುಗೆ ಗಳಿಸಿ, ಜನರ ಪ್ರಶಂಸೆಗೆ ಪಾತ್ರವಾಗಿದೆ.ಭಜನೆಯೊಂದಿಗೆ ಹಲವಾರು ಸಮಾಜಮುಖಿ ಕೆಲಸ ಕಾರ್ಯ ಸಾಧಿಸಿ ಸಾರ್ವಜನಿಕರಿಂದ ಪ್ರಶಂಸೆ ಗಳಿಸಿದೆ.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ನಿತ್ಯಾನಂದ ಕುಂದಾಪುರ ಅವರು ಬ್ರಹ್ಮಶ್ರೀ ಕುಣಿತ ಭಜನಾ ತಂಡದ ಸಂಚಾಲಕರಾದ ಹರೀಶ್ ವೈ ಚಂದ್ರಮ ಹಾಗೂ ತಂಡದ ಎಲ್ಲ ಸದಸ್ಯರಿಗೂ ಮತ್ತು ಉಪಸ್ಥಿತರಿದ್ದ ತಂಡದ ಪೋಷಕರಿಗೂ ಶಾಲು ಹಾಕಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರು, ಗುರುಗಳು, ಪೋಷಕರು ಪದಾಧಿಕಾರಿಗಳು ,ತಂಡದ ಸದಸ್ಯರು ಹಾಗೂ ಜಯರಾಮ್ ಕುಂದಾಪುರ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲೋಬೊ ಮೋಟಾರ್ಸ್ ನಲ್ಲಿ ಜೂಫಿಟರ್ 113 ಸಿಸಿ ಸ್ಕೂಟಿ, ಮಾರುಕಟ್ಟೆಗೆ ಬಿಡುಗಡೆ

Suddi Udaya

ಧರ್ಮಸ್ಥಳ ನೇತ್ರಾವತಿ ಸೇತುವೆಯ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ

Suddi Udaya

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya

ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

Suddi Udaya
error: Content is protected !!