32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಲವಂತಿಗೆ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

ಮಲವಂತಿಗೆ: ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.31ರಂದು ಗ್ರಾ.ಪಂ. ಅಧ್ಯಕ್ಷ ಪ್ರಕಾಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಪಶು ಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಡಾ. ರವಿಕುಮಾರ್ ಎಂ. ಭಾಗವಹಿಸಿ ಗ್ರಾಮ ಸಭೆಯನ್ನು ಮುನ್ನಡೆಸಿ, ಪಶು ಸಂಗೋಪನೆ ಇಲಾಖೆ ಯೋಜನೆಗಳ ಮಾಹಿತಿಯನ್ನು ನೀಡಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಕುಮಾರ್ ಮಾತನಾಡಿ ಗ್ರಾಮ ಸಭೆಯಲ್ಲಿ ಆರೋಗ್ಯಕರವಾದ ಚರ್ಚೆಗಳು ನಡೆದಿದೆ. ಮುಂದೆ ಗ್ರಾಮದ ಅಭಿವೃದ್ಧಿಗೆ ಗ್ರಾಮಸ್ಥರ ಸಹಾಯವನ್ನು ಕೇಳಿದರು.

ಸಭೆಯಲ್ಲಿ ಉಪಾಧ್ಯಕ್ಷೆ ಶ್ರೀಮತಿ ರೋಹಿಣಿ, ಸದಸ್ಯರಾದ ಕೆ.ಎಂ. ಮಹಮ್ಮದ್, ಡಿ. ದಿನೇಶ್ ಗೌಡ, ಸುಂದರ ಪೂಜಾರಿ, ಶ್ರೀಮತಿ ಅರುಣ, ಶ್ರೀಮತಿ ಪವಿತ್ರ, ಶ್ರೀಮತಿ ಅನಿತಾ ಕೆ, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಶ್ಮಿ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ

Suddi Udaya

ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

Suddi Udaya

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕನ್ಯಾಡಿ ಸರಕಾರಿ ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!