ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ: ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ರಾಷ್ಟೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ಯುದ್ಧದ ರಜತ ಮಹೋತ್ಸವದ ನೆನಪಿಗಾಗಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ ಜರಗಿತು.

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿಕ್ಟರ್ ಕ್ರಾಸ್ತಾ ಮಾಜಿ ಸೈನಿಕರು ಇವರು ವಿದ್ಯಾರ್ಥಿಗಳಿಗೆ ದೇಶ ಪ್ರೇಮ ಮತ್ತು ಸೈನ್ಯ ಹಾಗೂ ಸೈನಿಕರ ಬಗ್ಗೆ ಮಾಹಿತಿ ನೀಡಿದರು ಹಾಗೂ ಕಾರ್ಗಿಲ್ ಯುದ್ಧದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಒದಗಿಸಿದರು. ಹಾಗೂ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತೋಷ ಪ್ರಾಂಶುಪಾಲರು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆ ಇವರು ವಹಿಸಿದ್ದರು. ಹಾಗೂ ಎನ್ ಎಸ್ ಎಸ್ ನ ಯೋಜನಾಧಿಕಾರಿಗಳಾದ ಪ್ರಕಾಶ್ , ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿಗಳಾದ ಅವನೀಶ್ ಪಿ ಮತ್ತು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂಧಿಗಳು ಹಾಗೂ ಕಾಲೇಜು ನ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Comment

error: Content is protected !!