19.8 C
ಪುತ್ತೂರು, ಬೆಳ್ತಂಗಡಿ
November 26, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಎಚ್ಚರಿಕೆಯಿಂದ ಇರುವಂತೆ ತಾಲೂಕಿನ ಜನತೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮನವಿ ಮಾಡಿದ್ದಾರೆ.

ಜಿಲ್ಲೆಯ ಎಲ್ಲಾ ಜೀವ ನದಿಗಳು ಉಕ್ಕಿ ಹರಿಯುತ್ತಿದ್ದು ಜಿಲ್ಲೆಯನ್ನು ಸಂಪರ್ಕಿಸುವ ಎಲ್ಲಾ ಪ್ರಮುಖ ರಸ್ತೆಗಳಲ್ಲಿಯೂ ಭೂಕುಸಿತ ಹಾಗೂ ಮರಗಳು ರಸ್ತೆಗೆ ಉರುಳುತ್ತಿರುವ ಘಟನೆಗಳು ಈಗಾಗಲೇ ನಿಮ್ಮೆಲ್ಲರ ಗಮನಕ್ಕೂ ಬಂದಿರುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಅಗತ್ಯ ಸಂಚಾರ ನಡೆಸುವ ಸಂದರ್ಭ ಅತ್ಯಂತ ಹೆಚ್ಚಿನ ಕಾಳಜಿಯನ್ನು ವಹಿಸುವಂತೆ ವಿನಂತಿಸುತ್ತ. ಬೆಳ್ತಂಗಡಿ ತಾಲೂಕಿನಲ್ಲಿ ನದಿ ಪಾತ್ರಗಳಲ್ಲಿ ವಾಸಿಸುತ್ತಿರುವ ಎಲ್ಲಾ ಜನರು ಕೂಡ ತಮ್ಮ ರಕ್ಷಣೆ ಹಾಗೂ ಜಾನುವಾರುಗಳ ರಕ್ಷಣೆಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮಗಳನ್ನು ವಹಿಸಿಕೊಂಡು ಯಾವುದೇ ರೀತಿಯ ಅಪಾಯದ ಮುನ್ಸೂಚನೆ ದೊರೆತ ತಕ್ಷಣ ನಮ್ಮ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಹಾಗೂ’ ಶ್ರಮಿಕ’ ತಂಡ ನಿಮ್ಮ ಸಹಾಯಕ್ಕೆ ಸನ್ನದ್ಧವಾಗಿದ್ದು ನೀಡಲಾದ ತುರ್ತು ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ನೀಡಬಹುದು. ಹಗಲು ರಾತ್ರಿಯೆನ್ನದೆ ಯಾವುದೇ ಸಮಯದಲ್ಲಾದರೂ ಸಹಾಯಕ್ಕೆ ತಂಡ ಸದಾ ಸಿದ್ದವಾಗಿದೆ. ಎಂದು ಮನವಿಯನ್ನು ಮಾಡಿಕೊಂಡಿದ್ದಾರೆ.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

Suddi Udaya

ಲೋಕಸಭಾ ಚುನಾವಣಾ ನೀತಿ ಸಂಹಿತೆ: ಗ್ರಾ.ಪಂ. ನೌಕರರ ಶಾಂತಿಯುತ ಪ್ರತಿಭಟನೆ ಮುಕ್ತಾಯ: ಆ.20 ರಿಂದ ಬೆಂಗಳೂರು ವಿಧಾನಸೌಧ ಮುಂಭಾಗ ಬೃಹತ್ ಪ್ರತಿಭಟನೆ

Suddi Udaya

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ : ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya
error: Content is protected !!