30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಕೆಸರು ಕಂಡೊಡು ಗೌಡೆರೆ ಗೌಜಿ-ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ: ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ(ರಿ.) ಹಳೆಕೋಟೆ,, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಬೆಳ್ತಂಗಡಿ, ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಇವುಗಳ ಸಹಯೋಗದಲ್ಲಿ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಇವರ ನೇತೃತ್ವದಲ್ಲಿ ಆ. 18ರಂದು ವಾಣಿ ಶಿಕ್ಷಣ ಸಂಸ್ಥೆಗಳ ಹಿಂಭಾಗದ ಗದ್ದೆಯಲ್ಲಿ ನಡೆಯಲಿರುವ ಕೆಸರು ಕಂಡೊಡು ಗೌಡೆರೆ ಗೌಜಿ-ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿ ತಾಲೂಕು ಸಂಘದ ಅಧ್ಯಕ್ಷರಾದ ಕುಶಾಲಪ್ಪ ಗೌಡ ಪೂವಾಜೆ ಮತ್ತು ಗೌರವ ಅಧ್ಯಕ್ಷರಾದ ಹೆಚ್. ಪದ್ಮ ಗೌಡ ರವರ ಮೂಲಕ ವಾಣಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಬಿಡುಗಡೆ ಮಾಡಲಾಯಿತು.


ಈ ಸಂದರ್ಭದಲ್ಲಿ ತಾಲೂಕು ಸಂಘದ ಕಾರ್ಯದರ್ಶಿ ಗಣೇಶ್ ಗೌಡ ಕಡಿರುದ್ಯಾವರ, ಉಪಾಧ್ಯಕ್ಷರುಗಳಾದ ನಾರಾಯಣ ಗೌಡ ದೇವಸ್ಯ ಮತ್ತು ಧರ್ಣಪ್ಪ ಗೌಡ ಬಂದಾರು, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು, ಕೋಶಾಧಿಕಾರಿ ಯುವರಾಜ್ ಅನಾರು, ಜತೆ ಕಾರ್ಯದರ್ಶಿ ಶ್ರೀನಾಥ್ ನಡ, ಸದಸ್ಯರುಗಳಾದ ಗೋಪಾಲಕೃಷ್ಣ ಗುಲ್ಲೋಡಿ, ಬಾಲಕೃಷ್ಣ ಬಿರ್ಮೊಟ್ಟು, ವಿಜಯ ಕುಮಾರ್ ನ್ಯಾಯತರ್ಪು, ಶ್ರೀಮತಿ ಉಷಾದೇವಿ ಉಜಿರೆ, ಭವಾನಿ ಕಾಂತಪ್ಪ ಗೌಡ ಮುಡಾಯೂರು, ಪ್ರಸನ್ನ ಗೌಡ ಪುತ್ತಿಲ, ಮಾಧವ ಗೌಡ ಬೆಳ್ತಂಗಡಿ, ದಿನೇಶ್ ಗೌಡ ಕೊಯ್ಯೂರು, ವಸಂತ ಗೌಡ ನಡ, ಮಹಿಳಾ ವೇದಿಕೆಯ ಅಧ್ಯಕ್ಷೆ ಗೀತಾ ರಾಮಣ್ಣ ಗೌಡ, ಯುವ ವೇದಿಕೆ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ, ಸ್ಪಂದನಾ ಸೇವಾ ಸಂಘದ ಸಂಚಾಲಕರಾದ ಮೋಹನ ಗೌಡ ಕೊಯ್ಯೂರು, ಶ್ರೀ ಧ.ಮಂ.BNYS ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಧರ್ಮೇಂದ್ರ ಗೌಡ ಬೆಳಾಲು, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಸದಸ್ಯರುಗಳು, ಗ್ರಾಮ ಸಮಿತಿಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಸಹಕಾರಿ ಭಾರತೀಯ ಜಗದೀಶ್ ಶೆಟ್ಟಿ ಮೈರ ಆಯ್ಕೆ: ಕಾಂಗ್ರೆಸ್ ಬೆಂಬಲಿತ ಜಯವಿಕ್ರಮ್ ಗೆ ಸೋಲು

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

Suddi Udaya

ಬೆಳಾಲಿನಲ್ಲಿ ಎಸ್ ಡಿ ಎಂ ಎನ್ ಎಸ್ ಎಸ್ ಶಿಬಿರದ ಸಮಾರೋಪ

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

Suddi Udaya

ಸರಕಾರಿ ಪ್ರೌಢಶಾಲೆ ಮಚ್ಚಿನ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!