25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಎಚ್ಚರಿಕೆಯಿಂದ ಇರುವಂತೆ ತಾಲೂಕಿನ ಜನತೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮನವಿ ಮಾಡಿದ್ದಾರೆ.

ಜಿಲ್ಲೆಯ ಎಲ್ಲಾ ಜೀವ ನದಿಗಳು ಉಕ್ಕಿ ಹರಿಯುತ್ತಿದ್ದು ಜಿಲ್ಲೆಯನ್ನು ಸಂಪರ್ಕಿಸುವ ಎಲ್ಲಾ ಪ್ರಮುಖ ರಸ್ತೆಗಳಲ್ಲಿಯೂ ಭೂಕುಸಿತ ಹಾಗೂ ಮರಗಳು ರಸ್ತೆಗೆ ಉರುಳುತ್ತಿರುವ ಘಟನೆಗಳು ಈಗಾಗಲೇ ನಿಮ್ಮೆಲ್ಲರ ಗಮನಕ್ಕೂ ಬಂದಿರುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಅಗತ್ಯ ಸಂಚಾರ ನಡೆಸುವ ಸಂದರ್ಭ ಅತ್ಯಂತ ಹೆಚ್ಚಿನ ಕಾಳಜಿಯನ್ನು ವಹಿಸುವಂತೆ ವಿನಂತಿಸುತ್ತ. ಬೆಳ್ತಂಗಡಿ ತಾಲೂಕಿನಲ್ಲಿ ನದಿ ಪಾತ್ರಗಳಲ್ಲಿ ವಾಸಿಸುತ್ತಿರುವ ಎಲ್ಲಾ ಜನರು ಕೂಡ ತಮ್ಮ ರಕ್ಷಣೆ ಹಾಗೂ ಜಾನುವಾರುಗಳ ರಕ್ಷಣೆಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮಗಳನ್ನು ವಹಿಸಿಕೊಂಡು ಯಾವುದೇ ರೀತಿಯ ಅಪಾಯದ ಮುನ್ಸೂಚನೆ ದೊರೆತ ತಕ್ಷಣ ನಮ್ಮ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಹಾಗೂ’ ಶ್ರಮಿಕ’ ತಂಡ ನಿಮ್ಮ ಸಹಾಯಕ್ಕೆ ಸನ್ನದ್ಧವಾಗಿದ್ದು ನೀಡಲಾದ ತುರ್ತು ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ನೀಡಬಹುದು. ಹಗಲು ರಾತ್ರಿಯೆನ್ನದೆ ಯಾವುದೇ ಸಮಯದಲ್ಲಾದರೂ ಸಹಾಯಕ್ಕೆ ತಂಡ ಸದಾ ಸಿದ್ದವಾಗಿದೆ. ಎಂದು ಮನವಿಯನ್ನು ಮಾಡಿಕೊಂಡಿದ್ದಾರೆ.

Related posts

ನಾವರ: ರಾಜಪಾದೆ ದಿ| ಕೊರಗು ಹೆಗ್ಡೆ ರವರ ಶ್ರದ್ದಾಂಜಲಿ ಸಭೆ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya

ಕಿಲ್ಲೂರು ನಿವಾಸಿ ವೀರಮ್ಮ ನಿಧನ

Suddi Udaya

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಶಷ್ಟಬ್ಧಿ ಪೂರೈಸಿದ ಸುಣ್ಣೆಂಬಳ ವಿಶೇಶ್ವರ ಭಟ್ ರಿಗೆ ಗೌರವಾರ್ಪಣೆ

Suddi Udaya

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

Suddi Udaya
error: Content is protected !!