30.3 C
ಪುತ್ತೂರು, ಬೆಳ್ತಂಗಡಿ
May 19, 2025
ಜಿಲ್ಲಾ ಸುದ್ದಿ

ಬೆಳ್ತಂಗಡಿ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ: ಸುರಕ್ಷತೆಯನ್ನು ಅಳವಡಿಸಿ ಮನೆ ನಿರ್ಮಾಣಕ್ಕೆ ಜಿಲ್ಲಾಧಿಕಾರಿ ಸೂಚನೆ

ಬೆಳ್ತಂಗಡಿ: ತಾಲೂಕಿನಲ್ಲ ಅಧಿಕ ಮಳೆಯಾಗಿದ್ದು ಅಪಾರ ಹಾನಿಯಾಗಿದೆ. ಇದರ ಬಗ್ಗೆ ಪರಿಶೀಲನೆ ನಡೆಸಿ ತುರ್ತು ಕಾಮಗಾರಿಗಳ ವರದಿಯನ್ನು ಶೀಘ್ರವಾಗಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮುಂದೆ ಮನೆ ನಿರ್ಮಾಣದ ವೇಳೆ ಸುರಕ್ಷತೆಯನ್ನು ಅಳವಡಿಸಿ ಮನೆಗಳನ್ನು ನಿರ್ಮಿಸಬೇಕು, ಪರವಾನಿಗೆ ನೀಡುವಾಗ ಕೂಡಾ ಸುರಕ್ಷಿತಾ ನಿಯಮಗಳನ್ನು ಪಾಲಿಸಲು ಆದೇಶ ನೀಡಲಾಗುತ್ತದೆ. ಇಲ್ಲವಾದಲ್ಲಿ ಕೇರಳ ವಯನಾಡ್ ಸ್ಥಿತಿ ಬರಹುದು ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.

ಅವರು ಆ.1ರಂದು ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಮಾಧ್ಯಮದವರ ಜೊತೆ ಮಾತನಾಡಿದರು. ಬುದವಾರ ರಾತ್ರಿ ತಾಲೂಕಿನಲ್ಲಿ ಪ್ರಮುಖವಾಗಿ ನಾಲ್ಕು ಕಡೆ ರಸ್ತೆ ಸಂಚಾರಕ್ಕೆ ತಡೆಯಾಗಿದೆ. ಹಲವು ಕುಟುಂಬಗಳನ್ನು ಸ್ತಳಾಂತರಿಸಲಾಗಿದೆ . ಸಂಪೂರ್ಣ ಹಾನಿಯಾದ ಮನೆಗಳಿಗೆ ಸರಕಾರದ ನಿಯಮದಂತೆ ರೂ. 1.25 ಲಕ್ಷ ಪರಿಹಾರ ನೀಡಲಾಗುವುದು. ಉಳಿದಂತೆ ಹಾನಿಯನ್ನು ಪರಿಗಣಿಸಿ ಪರಿಹಾರ ನೀಡಲಾಗುವುದು ಎಂದರು. ಅತಿ ಹೆಚ್ಚು ಮಳೆಯಾಗುತ್ತಿರುವುದರಿಂದ ಅನಾಹುವಾಗದಂತೆ ತಡೆಯಲು,ಮಕ್ಕಳ ಮೇಲಿನ ಕಾಳಜಿಯಿಂದ ರಜೆ ನಿಡಲಾಗುತ್ತದೆ. ಪೋಷಕರು ಕೂಡ ಮಕ್ಕಳನ್ನು ಮಳೆ ಸಂದರ್ಭದಲ್ಲಿ ಹೊರಗೆ ಕಳಿಸಬಾರದು ಎಂದರು.
ತಾಲೂಕಿನ ಮದ್ದಡ್ಕ, ಪಡಂಗಡಿ, ಪೊಯ್ಯೆಗುಡ್ಡೆ ಸಂಪರ್ಕ ರಸ್ತೆ ಕುದ್ರೆಂಜ ಎಂಬಲ್ಲಿ ಸಂಪರ್ಕ ರಸ್ತೆ ಕುಸಿದಿದ್ದು ಇಲ್ಲಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರು ಇಂತಹ ಅಪಾಯಕಾರಿ ರಸ್ತೆಗಳಲ್ಲಿ ಪ್ರಯಾಣಿಸದಂತೆ ಮನವಿ ಮಾಡಿದರು. ಸಂಬಂದ ಪಟ್ಟ ಅಧಿಕಾರಿಗಳಿಗೆ ತುರ್ತು ಕಾಮಗಾರಿ ನಡೆಸಲು ಅಂದಾಜು ವೆಚ್ಚ ಮಾಡಿ ವರದಿ ನೀಡುವಂತೆ ಸೂಚಿಸಿದರು. ’
ಬಳಿಕ ಗುರುವಾಯನಕೆರೆ ಬಂಟರ ಭವನ, ಮಸೀದಿ, ಉಜಿರೆ, ಕಲ್ಮಂಜ, ಚಾರ್ಮಾಡಿ, ಸವಣಾಲು,ಅಳದಂಗಡಿ, ವೇಣೂರು, ಮರೋಡಿ, ಹೊಸಂಗಡಿ ಭಾಗಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ತಹಶೀಲ್ದಾರ್ ಪೃಥ್ವಿಸಾನಿಕಂ, ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್, ತಾ.ಪಂ ವ್ಯವಸ್ಥಾಪಕ ಪ್ರಶಾಂತ್ ಡಿ, ಸಹಾಯಕ ಕಾರ್ಯಪಾಲಕ ಅಭಿಯಂತರ ನಿತಿನ್ ನಾಯ್ಕ್, ನ.ಪಂ ಮುಖ್ಯಾಧಿಕಾರಿ ರಾಜೇಶ್, ಬಿಜೆಪಿ ಪ್ರದಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ನ.ಪಂ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್, ಪಡಂಗಡಿ ಗ್ರಾ ಪಂ ಅದ್ಯಕ್ಷೆ ಮೀನಾಕ್ಷಿ, ಉಪಾದ್ಯಕ್ಷ ಸಂತೋಷ್ ಕುಮಾರ್, ಸ್ಥಳೀಯ ಗ್ರಾ ಪಂ ಅದ್ಯಕ್ಷರುಗಳು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು,ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಇಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ: ಬೆಳ್ತಂಗಡಿ ತಾಲೂಕಿನ ಮೂರು ಮತಗಟ್ಟೆಗಳಲ್ಲಿ ನಡೆಯುತ್ತಿರುವ ಮತದಾನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya

ಎ.18: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ನಾಮಪತ್ರ ಸಲ್ಲಿಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ 12ನೇ ವಷ೯ದ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಶಿವನಾಮ ಸ್ಮರಣೆಯೊಂದಿಗೆ ಭಕ್ತರ ಹೆಜ್ಜೆ

Suddi Udaya

ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ : ಹರೀಶ್ ಪೂಂಜ

Suddi Udaya

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!