23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5‌ ಸಾವಿರ ಗಿಡಗಳ ವಿತರಣಾ ಕಾರ್ಯಕ್ರಮ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ)ಬೆಳ್ತಂಗಡಿ ತಾಲೂಕು. ವತಿಯಿಂದ,ಅರಣ್ಯ ಇಲಾಖೆಯ ಸಹಕಾರದೊಂದಿಗೆ ನೆಲ, ಜಲ ಪ್ರಾಣಿ ಸಂಕುಲ ಮತ್ತು ವನ ಸಂರಕ್ಷಣೆಯ ಪ್ರಯುಕ್ತ, ಡಾ.ಡಿ ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ. ಹೇಮಾವತಿ ವಿ ಅಮ್ಮನವರ ಮಾರ್ಗದರ್ಶನದೊಂದಿಗೆ ಸಾಮಾಜಿಕ ಅರಣೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ ಆ.1ರಂದು ಉಜಿರೆ ಶಾರದಾ ಮಂಟಪದಲ್ಲಿ ಜರುಗಿತು.

ಉದ್ಘಾಟನೆಯನ್ನು ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರಾದ ಶರತ್‌ಕೃಷ್ಣ ಪಡುವೆಟ್ನಾಯ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ನಾವು ಪ್ರಕೃತಿ ಆರಾಧಕರು, ಆದರೆ ಇಂದು ಆರಾಧನೆಗೆ ಪ್ರಕೃತಿ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದು ವೈನಾಡಿನಲ್ಲಿ ಘೋರ ದುರಂತವನ್ನು ಕಂಡಿದ್ದೇವೆ. ಪ್ರಕೃತಿ ಅನಾಹುತ ನಮ್ಮ ಮನೆ ಬಾಗಿಲಿಗೆ ಬಂದು ನಿಂತಿದೆ. ಅದಕ್ಕಾಗಿ ನಾವು ಪ್ರಕೃತಿ ಮತ್ತು ಮಣ್ಣಿನ ಸಂರಕ್ಷಣೆ ಬಗ್ಗೆ ಯೋಚಿಸಬೇಕು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪ್ರಕೃತಿ ಉಳಿಸುವ ದೊಡ್ಡ ಕಾಯ೯ಕ್ರಮ ನಡೆಯುತ್ತಿದೆ ಎಂದು ತಿಳಿಸಿದರು.


ಪ್ರಾದೇಶಿಕ ಕೃಷಿ ನಿರ್ದೇಶಕರು, ಕೇಂದ್ರ ಕಛೇರಿ, ಧರ್ಮಸ್ಥಳ ಮನೋಜ್ ವಿನೇಜಸ್ ಸಸಿಗಳನ್ನು ವಿತರಿಸಿದರು.
ಲೋಕೇಶ್ ಉಪವಲಯ ಅರಣ್ಯಾಧಿಕಾರಿ, ಅರಣ್ಯ ಇಲಾಖೆ ಉಜಿರೆ ಗಿಡ ನಾಟಿಗೆ ಚಾಲನೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ್‌ ಆ‌ರ್. ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಯೋಜನಾಧಿಕಾರಿಗಳು, ಎಸ್.ಕೆ.ಡಿ.ಆರ್.ಡಿ.ಪಿ. ಸುರೇಂದ್ರ, ಶೌರ್ಯ’ ವಿಪತ್ತು ನಿರ್ವಹಣಾ ಘಟಕ, ಬೆಳ್ತಂಗಡಿಯ ಕ್ಯಾಪ್ಟನ್ ಸಂತೋಷ್ ಭಾಗವಹಿಸಿದ್ದರು. ಕೃಷಿ ನಿರ್ದೇಶಕ ರಾಮ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಬೆಳ್ತಂಗಡಿ ಜೈನ ಬಸದಿ ಬಳಿ ಕಾರುಗಳೆರಡು ಪರಸ್ಪರ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

Suddi Udaya

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶ

Suddi Udaya

ಅಳದಂಗಡಿ ಬೆಟ್ಟದ ಬಸದಿ ಅಭಿವೃದ್ಧಿಯ ಕಾರ್ಯಕ್ಕೆ ಸರಕಾರದಿಂದ ರೂ. 50ಲಕ್ಷ ಮಂಜೂರು ಸಹಕರಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಆಡಳಿತ ಮಂಡಳಿಯಿಂದ ಗೌರವ

Suddi Udaya

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

Suddi Udaya
error: Content is protected !!