September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

ಗರ್ಡಾಡಿ: ತಾಲೂಕಿನಯಾದ್ಯಂತ ಭಾರಿ ಮಳೆ ಮುಂದುವರಿದಿದ್ದು ಪಡಂಗಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಗರ್ಡಾಡಿ ಗ್ರಾಮದ ಹಳ್ಳಿಂಜಬೀಡು ಪರಿಸರದಲ್ಲಿ ಮಣ್ಣು ಕುಸಿದು ಮನೆಗೆ ಭಾಗಶಃ ಹಾನಿಯಾಗಿದೆ.

ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬುಧವಾರ ರಾತ್ರಿ ಏಕಾಏಕಿ ಮಣ್ಣು ಕುಸಿದು ಮನೆಗೆ ಬಿದ್ದಿದೆ. ಪರಿಣಾಮ ಪ್ರವೀಣ್ ಪೂಜಾರಿಯವರ ಮನೆ ಭಾಗಶಃ ಹಾನಿಯಾಗಿದೆ.

ರಾತ್ರಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ನಿವಾಸಿಗಳಿಗೆ ಯಾವುದೇ ತೊಂದರೆಯಾಗಿಲ್ಲ. ಮನೆಯ ಗೋಡೆ ಮಣ್ಣಿನದಾಗಿದ್ದು ಮಣ್ಣು ಬಿದ್ದ ರಭಸಕ್ಕೆ ಗೋಡೆಗಳು ಬಿದ್ದಿವೆ.

ಪಡಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಸುವರ್ಣ ಅವರು ರಾತ್ರಿ 4 ಗಂಟೆಗೆ ಬಂದು ಮನೆಯ ಸಾಮಾಗ್ರಿಗಳನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ.

ಇಗಾಗಲೇ ಸಂಬಂದ ಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಲಾಗಿದೆ.

Related posts

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಪೆರ್ಲ-ಬೈಪಾಡಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

Suddi Udaya

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಮುಖಂಡ ಸತ್ಯಜಿತ್ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸುತ್ತೇವೆ : ಎಂ.ಕೆ ಪ್ರಸಾದ್

Suddi Udaya

ಮಡಂತ್ಯಾರು: ಚರಂಡಿಗೆ ಜಾರಿದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!