September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ

ಮುಂಡಾಜೆ ಗ್ರಾಮದ ಸೋಮಂತಡ್ಕ ಮಜಲು ರಸ್ತೆ ನಡೆದು ಹೋಗಲು ಅಸಾಧ್ಯವಾದ ರಸ್ತೆಯಾಗಿ ಪರಿಣಮಿಸಿದೆ.

ಆ.1 ರಂದು ವಾಹನಗಳು ಈ ರಸ್ತೆಯಲ್ಲಿ ಸಿಲುಕಿಕೊಂಡು ಸಾರ್ವಜನಿಕರ ಸಹಕಾರದಿಂದ ಮೇಲೆತ್ತಲಾಯಿತು. ನಂತರ ಗ್ರಾಮ ಪಂಚಾಯತ್ ಸದಸ್ಯೆ ದಿಶಾ ದಿನೇಶ ಪಟವರ್ಧನ್ ಅವರ ನೇತೃತ್ವದಲ್ಲಿ ಸ್ಥಳೀಯರು ಸೇರಿ ಎರಡು ಲೋಡು ಚರಲು ಹಾಕಲಾಯಿತು.

ರಸ್ತೆಯ ಇಕ್ಕಲಗಳಲ್ಲಿ ಕಾಲುವೆಗಳು ಕಸದಿಂದ ತುಂಬಿದ್ದು, ಏಪ್ರಿಲ್ -ಮೇ ತಿಂಗಳಲ್ಲಿ ಗ್ರಾಮ ಪಂಚಾಯತ್ ಸರಿಯಾದ ಕಾಮಗಾರಿ ನಡೆಸದೆ ಇದ್ದುದರಿಂದ ಈ ರೀತಿಯಾಗಿದೆ ಎಂದು ಸ್ಥಳೀಯರು ದೂರಿಕೊಂಡಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿ ರಬ್ಬರ್ ತೋಟಗಳಿದ್ದು ಮರದ ಗೆಲ್ಲುಗಳು ರಸ್ತೆಗೆ ಬಿದ್ದು ರಸ್ತೆ ಸಂಪೂರ್ಣ ಹಾಳಾಗಿದೆ.

ಸುಮಾರು 20 ವರ್ಷಗಳ ಹಿಂದೆ ಈ ರಸ್ತೆಗೆ ಡಾಮರೀಕರಣವಾಗಿದ್ದು ನಂತರ ಯಾವುದೇ ಕಾಮಗಾರಿ ನಡೆದಿಲ್ಲ. ಮಳೆಗಾಲದಲ್ಲಿ ಬಿಡಿ, ಬೇಸಿಗೆಯಲ್ಲೂ ನಡೆದು ಹೋಗಲು ಕಷ್ಟವಾಗುತ್ತಿದ್ದು, ನೂರಾರು ವಿದ್ಯಾರ್ಥಿಗಳು ಇದೇ ರಸ್ತೆಯಲ್ಲಿ ಶಾಲೆಗೆ ನಡೆದು ಬರುತ್ತಿದ್ದಾರೆ. ಮುಂಡಾಜೆ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಮುಖ್ಯ ರಸ್ತೆಯಾಗಿ ಇರುವ ಈ ದಾರಿ ಸರಿಯಾಗಲು ಇನ್ನೆಷ್ಟು ಸಮಯ ಕಾಯಬೇಕೋ ಎಂದು ಸ್ಥಳೀಯರು ಹಿಡಿ ಶಾಪ ಹಾಕುತ್ತಿದ್ದಾರೆ.

ಈ ಹಿಂದೆ ಹಲವಾರು ಬಾರಿ ಮಜಲು ವಾಳ್ಯದ ಮಂದಿ ಶ್ರಮದಾನದ ಮೂಲಕ ಈ ರಸ್ತೆಯ ಕಲ್ಲು ಹೆಕ್ಕುವ, ಕಾಲುವೆಯನ್ನು ದುರಸ್ತಿಗೊಳಿಸುವ ಕಾರ್ಯ ಮಾಡಿದ್ದರು. ಈ ವರ್ಷದ ಮಳೆಗೆ ಎಲ್ಲವೂ ಕೊಚ್ಚಿ ಹೋಗಿದೆ. ಈ ಮಳೆಗಾಲವಂತು ಈ ರಸ್ತೆಗೆ ದ್ವಿಚಕ್ರ ವಾಹನವೂ ಸೇರಿದಂತೆ ಯಾವುದೇ ವಾಹನ ಸಂಚಾರ ಅಸಾಧ್ಯದ ಮಾತು. ಮುಂದಿನ ದಿನಗಳಲ್ಲಾದರೂ ಕಾಂಕ್ರೀಟೀಕರಣವಾಗಲಿ ಎನ್ನುವುದು ಸ್ಥಳೀಯರ ಆಶಯ. ಈ ಪ್ರದೇಶದ ಮತದಾರರು ಮತದಾನ ಬಹಿಷ್ಕರಿಸುವ ಬೆದರಿಕೆ ಹಾಕಿದ್ದರು. ಆಗ ರಾಜಕಾರಣಿಗಳು ಸರಿಪಡಿಸುವ ಆಶ್ವಾಸನೆ ನೀಡಿದ್ದರು. ಆದರೆ ನಂತರ ಎಲ್ಲರೂ ಮರೆತು ಹೋಗಿದೆ.
ಆದಷ್ಟು ಬೇಗ ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತಾಗಲಿ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Related posts

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಗುರು ಪೂಜೆ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಜು.23: ದೆಹಲಿಯಲ್ಲಿ ಬಿಎಮ್ಎಸ್ ಇದರ 70ನೇ ವರ್ಷದ ಕಾರ್ಯಕ್ರಮಗಳ ಸಮಾರೋಪ : ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಸಭಾಭಾವನದಲ್ಲಿ ನೇರಪ್ರಸಾರ

Suddi Udaya

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya

ಎಸ್.ಡಿ.ಎಂ ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಜಿನ್ ಹ್ಯಾಟ್ರಿಕ್ ಮನ್ನಣೆ

Suddi Udaya

ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

Suddi Udaya
error: Content is protected !!