26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲಾತಬೆಟ್ಟು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ-ರಕ್ಷಕ ಸಭೆ

ನಯನಾಡು : ಇಲ್ಲಿಯ ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ-ರಕ್ಷಕ ಸಭಾ ಕಾರ್ಯಕ್ರಮವು ಇತ್ತೀಚೆಗೆ ಶಾಲಾ ಸಭಾಂಗಣದಲ್ಲಿ ಜರುಗಿತು.


ಕಾರ್ಯಕ್ರಮವನ್ನು ಇಲ್ಲಿನ ಚರ್ಚ್‌ನ ಧರ್ಮಗುರು ಅನಿಲ್ ಅವಿಲ್ಡ್ ಲೋಬೊರವರು ಉದ್ಘಾಟಿಸಿ ಶಿಕ್ಷಕ ರಕ್ಷಕ ಸಭೆಯ ಉದ್ದೇಶ ಮಾಹಿತಿಯನ್ನು ಪೋಷಕರಿಗೆ ಸವಿವರವಾಗಿ ತಿಳಿಸಿದರು.


ಈ ಸಂದರ್ಭ ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಮೋಂತಿ ಡಿ’ಸೋಜಾ ಸ್ವಾಗತಿಸಿ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ನೀಡಿ ಪೋಷಕರ ಬೆಂಬಲನ್ನು ಸ್ಮರಿಸಿ, ಆಡಳಿತ ಮಂಡಳಿಯ ಶುಭಾಶಯ ನೀಡಿ ಶಿಕ್ಷಕ ವೃಂದದ ಅವಿರತ ಪ್ರಯತ್ನವನ್ನು ಶ್ಲಾಘಿಸಿದರು.


ಶಿಕ್ಷಕಿ ಚೈತ್ರಾ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಪ್ರಮಿತಾ ಧನ್ಯವಾದವಿತ್ತರು.
ಈ ಸಂದರ್ಭ ಶಿಕ್ಷಕ-ರಕ್ಷಕ ಸಮಿತಿಯ ಪದಾಧಿಕಾರಿಗಳು ವಿದ್ಯಾರ್ಥಿಗಳ ಪೋಷಕರು, ಶಿಕ್ಷಕ ವೃಂದ ಉಪಸ್ಥಿತರಿದ್ದರು.

Related posts

ಕಿಲ್ಲೂರು ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಆಶ್ರಯದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟ

Suddi Udaya

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ, ಕೃಷಿ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸುವರ್ಣ ಮಹೋತ್ಸವ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಲೋಕಾರ್ಪಣೆ

Suddi Udaya

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಪ್ರೌಢಶಾಲೆಗಳಿಗೆ ಹಾಗೂ ಪ.ಪೂ. ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!