31.1 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ

ಮುಂಡಾಜೆ ಗ್ರಾಮದ ಸೋಮಂತಡ್ಕ ಮಜಲು ರಸ್ತೆ ನಡೆದು ಹೋಗಲು ಅಸಾಧ್ಯವಾದ ರಸ್ತೆಯಾಗಿ ಪರಿಣಮಿಸಿದೆ.

ಆ.1 ರಂದು ವಾಹನಗಳು ಈ ರಸ್ತೆಯಲ್ಲಿ ಸಿಲುಕಿಕೊಂಡು ಸಾರ್ವಜನಿಕರ ಸಹಕಾರದಿಂದ ಮೇಲೆತ್ತಲಾಯಿತು. ನಂತರ ಗ್ರಾಮ ಪಂಚಾಯತ್ ಸದಸ್ಯೆ ದಿಶಾ ದಿನೇಶ ಪಟವರ್ಧನ್ ಅವರ ನೇತೃತ್ವದಲ್ಲಿ ಸ್ಥಳೀಯರು ಸೇರಿ ಎರಡು ಲೋಡು ಚರಲು ಹಾಕಲಾಯಿತು.

ರಸ್ತೆಯ ಇಕ್ಕಲಗಳಲ್ಲಿ ಕಾಲುವೆಗಳು ಕಸದಿಂದ ತುಂಬಿದ್ದು, ಏಪ್ರಿಲ್ -ಮೇ ತಿಂಗಳಲ್ಲಿ ಗ್ರಾಮ ಪಂಚಾಯತ್ ಸರಿಯಾದ ಕಾಮಗಾರಿ ನಡೆಸದೆ ಇದ್ದುದರಿಂದ ಈ ರೀತಿಯಾಗಿದೆ ಎಂದು ಸ್ಥಳೀಯರು ದೂರಿಕೊಂಡಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿ ರಬ್ಬರ್ ತೋಟಗಳಿದ್ದು ಮರದ ಗೆಲ್ಲುಗಳು ರಸ್ತೆಗೆ ಬಿದ್ದು ರಸ್ತೆ ಸಂಪೂರ್ಣ ಹಾಳಾಗಿದೆ.

ಸುಮಾರು 20 ವರ್ಷಗಳ ಹಿಂದೆ ಈ ರಸ್ತೆಗೆ ಡಾಮರೀಕರಣವಾಗಿದ್ದು ನಂತರ ಯಾವುದೇ ಕಾಮಗಾರಿ ನಡೆದಿಲ್ಲ. ಮಳೆಗಾಲದಲ್ಲಿ ಬಿಡಿ, ಬೇಸಿಗೆಯಲ್ಲೂ ನಡೆದು ಹೋಗಲು ಕಷ್ಟವಾಗುತ್ತಿದ್ದು, ನೂರಾರು ವಿದ್ಯಾರ್ಥಿಗಳು ಇದೇ ರಸ್ತೆಯಲ್ಲಿ ಶಾಲೆಗೆ ನಡೆದು ಬರುತ್ತಿದ್ದಾರೆ. ಮುಂಡಾಜೆ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಮುಖ್ಯ ರಸ್ತೆಯಾಗಿ ಇರುವ ಈ ದಾರಿ ಸರಿಯಾಗಲು ಇನ್ನೆಷ್ಟು ಸಮಯ ಕಾಯಬೇಕೋ ಎಂದು ಸ್ಥಳೀಯರು ಹಿಡಿ ಶಾಪ ಹಾಕುತ್ತಿದ್ದಾರೆ.

ಈ ಹಿಂದೆ ಹಲವಾರು ಬಾರಿ ಮಜಲು ವಾಳ್ಯದ ಮಂದಿ ಶ್ರಮದಾನದ ಮೂಲಕ ಈ ರಸ್ತೆಯ ಕಲ್ಲು ಹೆಕ್ಕುವ, ಕಾಲುವೆಯನ್ನು ದುರಸ್ತಿಗೊಳಿಸುವ ಕಾರ್ಯ ಮಾಡಿದ್ದರು. ಈ ವರ್ಷದ ಮಳೆಗೆ ಎಲ್ಲವೂ ಕೊಚ್ಚಿ ಹೋಗಿದೆ. ಈ ಮಳೆಗಾಲವಂತು ಈ ರಸ್ತೆಗೆ ದ್ವಿಚಕ್ರ ವಾಹನವೂ ಸೇರಿದಂತೆ ಯಾವುದೇ ವಾಹನ ಸಂಚಾರ ಅಸಾಧ್ಯದ ಮಾತು. ಮುಂದಿನ ದಿನಗಳಲ್ಲಾದರೂ ಕಾಂಕ್ರೀಟೀಕರಣವಾಗಲಿ ಎನ್ನುವುದು ಸ್ಥಳೀಯರ ಆಶಯ. ಈ ಪ್ರದೇಶದ ಮತದಾರರು ಮತದಾನ ಬಹಿಷ್ಕರಿಸುವ ಬೆದರಿಕೆ ಹಾಕಿದ್ದರು. ಆಗ ರಾಜಕಾರಣಿಗಳು ಸರಿಪಡಿಸುವ ಆಶ್ವಾಸನೆ ನೀಡಿದ್ದರು. ಆದರೆ ನಂತರ ಎಲ್ಲರೂ ಮರೆತು ಹೋಗಿದೆ.
ಆದಷ್ಟು ಬೇಗ ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತಾಗಲಿ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Related posts

ತೆಕ್ಕಾರು: ವಿದ್ಯುತ್ ತಂತಿಯ ಮೇಲೆ ಬಿದ್ದ ಮರ

Suddi Udaya

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ

Suddi Udaya

ಕು.ಸೌಜನ್ಯಳ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ

Suddi Udaya

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಿಡ್ಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya
error: Content is protected !!