April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಸಮಸ್ಯೆ

ಪಶ್ಚಿಮ ಘಟ್ಟದ ಎಲ್ಲ ಅರಣ್ಯ ಒತ್ತುವರಿ ಮತ್ತು ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವರಿಂದ ಖಡಕ್ ಸೂಚನೆ

ಶಿರೂರು ಮತ್ತು ಹಾಗೂ ಕೇರಳದ ವಯನಾಡ್ಭೂಕುಸಿತದಿಂದ ಎಚ್ಚೆತ್ತುಕೊಂಡ ಕರ್ನಾಟಕ ಸರ್ಕಾರ, ಪಶ್ಚಿಮ ಘಟ್ಟದಲ್ಲಿನ ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ತೆರವಿಗೆ ಖಡಕ್ ಸೂಚನೆ ನೀಡಿದೆ. ಈ ಸಂಬಂಧ ಅರಣ್ಯ ಖಾತೆ ಸಚಿವ ಈಶ್ವ‌ರ್ ಖಂಡ್ರೆ ಅವರು ಸುತ್ತೋಲೆ ಹೊರಡಿಸಿದ್ದು, ಪಶ್ಚಿಮ ಘಟ್ಟದಲ್ಲಿ 2015ರಿಂದ ಈಚೆಗೆ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ.

ಅಲ್ಲದೇ ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ. ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015 ರಿಂದ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಪಶ್ಚಿಮ ಘಟ್ಟದ ಎಲ್ಲ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ, ರೆಸಾರ್ಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಅರಣ್ಯ ಒತ್ತುವರಿಯನ್ನು ತಕ್ಷಣದಿಂದಲೇ ತೆರವುಗೊಳಿಸಬೇಕು. ಒಂದು ತಿಂಗಳ ಒಳಗಡೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸಬೇಕೆಂದು ಈಶ್ವ‌ರ್ ಖಂಡ್ರೆ ಸೂಚಿಸಿದ್ದಾರೆ.ಶಿರೂರು, ವಯನಾಡ್ ಭೂಕುಸಿತ ರಾಜ್ಯಕ್ಕೆ ಎಚ್ಚರಿಕೆ ಗಂಟೆ ಆಗಿದ್ದು ಪಶ್ಚಿಮ ಘಟ್ಟದ ಉಳಿವಿಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

ರಾಜ್ಯದ ಪಶ್ಚಿಮ ಘಟ್ಟದಲ್ಲಿ 2015 ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಅರಣ್ಯ ಸಚಿವ ಈಶ್ವ‌ರ್ ಖಂಡ್ರೆ ಹೇಳಿದರು.

ಉತ್ತರ ಕನ್ನಡ ಜಿಲ್ಲೆಯ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಮಂದಿ ಬಲಿಯಾಗಿದ್ದಾರೆ. ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ ಸಾವಿನ ಸಂಖ್ಯೆ 300 ದಾಟ್ಟಿದ್ದು, ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ. ಇನ್ನು ದುರಂತದಲ್ಲಿ ಹಲವು ಕುಟುಂಬಗಳು ಮನೆ, ಮಠ ಕಳೆದುಕೊಂಡು ಕಂಗಲಾಗಿದ್ದಾರೆ.ಅಲ್ಲದೇ ಈಗಾಗಲೇ ಚಿಕ್ಕಮಗಳೂರು, ಹಾಸನ, ಕೊಡಗು ಭಾಗಗಳಲ್ಲಿ ಭೂಕುಸಿತ, ಗುಡ್ಡಕುಸಿತ ಭೀತಿ ಶುರುವಾಗಿದೆ. ಇನ್ನು ವಯನಾಡ್‌ ದುರಂತ ಸಾಮಾಜಿಕ ಜಾಲತಾಣಗಳಲ್ಲಿ ನಾನಾ ರೀತಿಯ ಅಭಿಪ್ರಾಯಗಳು ವ್ಯಕ್ತವಾಗಿತ್ತಿವೆ. ಗಿಡ-ಮರಗಳನ್ನು ನಾಶ ಮಾಡಿ ಬಡಾವಣೆ, ರೆಸಾರ್ಟ್, ಹೋಂ ಸ್ಟೇ ನಿರ್ಮಾಣದಿಂದ ಈ ರೀತಿಯ ದುರಂತಗಳು ನಡೆಯುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Related posts

ಬದುಕು ಕಟ್ಟೋಣ ಬನ್ನಿ ತಂಡದಿಂದ “ಕನಸು ಇದು ಭರವಸೆಯ ಬೆಳಕು”: ವಿದ್ಯಾರ್ಥಿಗಳೊಂದಿಗೆ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸ.ಪ್ರ.ದ. ಕಾಲೇಜಿನಲ್ಲಿ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಹಿಳಾ ಹಾಗೂ ಮಕ್ಕಳ ಗ್ರಾಮ ಸಭೆ

Suddi Udaya

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

Suddi Udaya

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

Suddi Udaya
error: Content is protected !!