23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಬೆಳ್ತಂಗಡಿ: ಕರ್ನಾಟಕ ಸರಕಾರದ ಆರೋಗ್ಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆ.2 ರಂದು ಬೆಳ್ತಂಗಡಿ ತಾಲೂಕಿನಲ್ಲಿ ಭೀಕರ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮದ್ದಡ್ಕ ಸಮೀಪದ ಪಡಂಗಡಿ, ಪೊಯ್ಯಗುಡ್ಡೆ ಸಂಪರ್ಕ ರಸ್ತೆ ಕುದ್ರೆಂಜ ಎಂಬಲ್ಲಿ ಸಂಪರ್ಕ ರಸ್ತೆ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಲಾಯಿಲ ಗ್ರಾಮದ ಆಯಿಲ, ಗುರುವಾಯನಕೆರೆ ಮೊದಲಾದ ಪ್ರದೇಶಗಳಿಗೆ ಭೇಟಿ ನೀಡಿ ಮಳೆಯಿಂದ ಆಗಿರುವ ಅನಾಹುತಗಳ ಬಗ್ಗೆ ಪರಿಶೀಲನೆ ನಡೆಸಿದರು.

ಈ ಸಂದರ್ಭಲ್ಲಿ ದ.ಕ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ. ತಹಶೀಲ್ದಾರ್ ಪೃಥ್ವಿ ಸಾನಿಕಂ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಕಂದಾಯ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ ಅಧ್ಯಕ್ಷ ಹಾಗೂ ಸದಸ್ಯರು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Related posts

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಗ್ರಾಮ ಸಭೆ, ಮಹಿಳಾ ಗ್ರಾಮ ಸಭೆ ಹಾಗೂ ದೂರ ದೃಷ್ಟಿ ಯೋಜನೆಯ ಗ್ರಾಮ ಸಭೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ್‍ಯಾಂಕ್

Suddi Udaya

ಮುಂಡಾಜೆ ಮಾಲತಿ ಪ್ರಭು ನಿಧನ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಶೇ.98.31 ಫಲಿತಾಂಶ

Suddi Udaya
error: Content is protected !!