ಬೆಳ್ತಂಗಡಿ : ಮೂಡ ಹಗರಣ ಮತ್ತು ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಹಮ್ಮಿಕೊಂಡಿದ್ದ ಮೈಸೂರು ಚಲೋ ಪಾದಯಾತ್ರೆ ಆ.3 ರಿಂದ ಆರಂಭಗೊಂಡಿದೆ .
ಪಾದಯಾತ್ರೆಯ ಸಂಪೂರ್ಣ ನಿರ್ವಹಣೆಯ ಹೊಣೆಯನ್ನು ಬೆಳ್ತಂಗಡಿ ಶಾಸಕ ಮತ್ತು ಬಿಜೆಪಿ ರಾಜ್ಯ ಯುವ ಮೋರ್ಛಾ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಂಜ ವಹಿಸಿಕೊಂಡಿದ್ದಾರೆ . ರಾಜ್ಯ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರ ಪಡೆ ಮುಂದಿನ ಏಳು ದಿನಗಳ ಕಾಲ ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆಯಲಿರುವ ಪಾದಯಾತ್ರೆಯಲ್ಲಿ ಭಾಗಿಯಾಗಿಯಾಗಲಿದೆ.ಬೆಳ್ತಂಗಡಿಯಿಂದ ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಬೆಳ್ತಂಗಡಿ ಯುವ ಮೋರ್ಚ ಅಧ್ಯಕ್ಷರಾದ ಶಶಿ ರಾಜ್ ಶೆಟ್ಟಿ ಮತ್ತು ಅವರ ತಂಡ ಪಾಲ್ಗೊಂಡಿದೆ.