24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ವೈಚಾರಿಕ ಹಾಗೂ ವೈಜ್ಞಾನಿಕ ವಿಚಾರಗಳನ್ನು ಒಳಗೊಂಡ ತುಳುನಾಡಿನ ಆಚರಣೆಗಳು ಬಹು ವೈಶಿಷ್ಟ್ಯತೆಯಿಂದ ಕೂಡಿದೆ ಎಂದು ವಾಣಿ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಮೀನಾಕ್ಷಿ ಹೇಳಿದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ಜರಗಿದ ಆಟಿ ಒಂಜಿ ನೆಂಪು ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ತುಳು ನಾಡಿನ ಜನರು ಪ್ರಕೃತಿಗೆ ಪೂರಕವಾಗಿ ನಡೆದುಕೊಂಡಿದ್ದು ವರ್ಷದ ಎಲ್ಲಾ ಕಾಲದಲ್ಲೂ ಬದುಕುವ ಕಲೆಯನ್ನು ರೂಡಿಸಿಕೊಂಡಿದ್ದರು. ಆಷಾಢ ತಿಂಗಳಲ್ಲಿ ಆಹಾರದ ಕೊರತೆಯಾದಾಗ ಪರಿಸರದಲ್ಲಿ ದೊರೆಯುವ ಸೊಪ್ಪು, ಗೆಡ್ಡೆ , ಗೆಣಸುಗಳನ್ನು ತಿಂದು ಜೀವಿಸುವುದರೊಂದಿಗೆ ತಮ್ಮ ಆರೋಗ್ಯವನ್ನು ಕಾಪಾಡಿಕೊಂಡಿದ್ದರು. ಇದರಿಂದ ವರ್ಷವಿಡಿ ರೋಗ ಮುಕ್ತರಾಗಿರಲು ಸಾಧ್ಯವಾಗಿತ್ತು. ಇಂದಿನ ಕಾಲದ ಜನರು ತುಳುನಾಡಿನ ಆಚರಣೆಗಳ ಮಹತ್ವವನ್ನು ತಿಳಿದುಕೊಂಡು ಮುಂದಿನ ಪೀಳಿಗೆಗೆ ಹೇಳಿಕೊಡಬೇಕು ಎಂದರು.


ವಾಣಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ ಚೆನ್ನೆಮಣೆ ಆಟ ಆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಇವತ್ತಿನ ಜನರು ಪ್ರಕೃತಿದತ್ತ ಆಹಾರದ ಬದಲು ಹೆಚ್ಚಾಗಿ ರೆಸ್ಟೋರೆಂಟ್ ಆಹಾರವನ್ನು ತಿನ್ನುತ್ತಾರೆ. ಹಾಗಾಗಿ ಬೇರೆ ಬೇರೆ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ. ಕಷ್ಟಪಟ್ಟು ದುಡಿದು ಉತ್ತಮವಾದ ಆಹಾರವನ್ನು ತಿಂದಾಗ ಮಾತ್ರ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಸಾಧ್ಯ ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಉಪಸ್ಥಿತರಿದ್ದರು.
‌‌ ತುಳು ಸಂಘದ ಸಂಯೋಜಕರಾದ ಮಹಾಬಲ ಗೌಡ ಸ್ವಾಗತಿಸಿದರು. ಉಪನ್ಯಾಸಕ ಬೆಳ್ಳಿಯಪ್ಪ. ಕೆ ವಂದಿಸಿದರು. ಕುಮಾರಿ ಅನುಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ ಪೊಲೀಸ್ ಠಾಣೆಯ ಪಿ.ಎಸ್.ಐ ಅನಿಲ್ ಕುಮಾರ್ ವರ್ಗಾವಣೆ: ನೂತನ ಪಿಎಸ್ಐ ಆಗಿ ಕಿಶೋ‌ರ್.ಪಿ ನೇಮಕ

Suddi Udaya

ಮಹಾಶಿವರಾತ್ರಿಯ ಪ್ರಯಕ್ತ: ಫೆ.15,16 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಕೊಕ್ರಾಡಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಗೌರವ

Suddi Udaya

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Suddi Udaya

ಬಲಿಪ ಪ್ರಸಾದ ಸಂಸ್ಮರಣೆ ಸರಣಿ ಕಾರ್ಯಕ್ರಮ : ಕಾನರ್ಪ ಉಮೇಶ ಆಚಾರ್ಯರಿಗೆ ಸನ್ಮಾನ

Suddi Udaya
error: Content is protected !!