ಅಪರಾಧ ಸುದ್ದಿ

ಬಾಲಕಿ ಮೇಲೆ ಅತ್ಯಚಾರ ಪ್ರಕರಣ ಬೆಳ್ತಂಗಡಿ ಆರೋಪಿಗೆ ಕಠಿಣ ಶಿಕ್ಷೆ

ಮಂಗಳೂರು; ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ತಂಗಡಿಯ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ  ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಬೆಳ್ತಂಗಡಿ ತಾಲೂಕು ಕೊಕ್ರಾಡಿಯ ಯೋಗೀಶ (26) ಶಿಕ್ಷೆಗೊಳಗದ ಆರೋಪಿ.

ಆರೋಪಿ ಯೋಗೀಶ 2020ರಲ್ಲಿ ಆರೋಪಿ ಬಾಲಕಿಯನ್ನು ಪುಸಲಾಯಿಸಿಕೊಂಡು ಕಾಡಿಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದ.ಪರಿಣಾಮ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸ್ ವೃತ್ತ ನಿರೀಕ್ಷಕ ಶಿವ ಕುಮಾರ್ ಬಿ. ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. 13 ಸಾಕ್ಷಿದಾರರನ್ನು ವಿಚಾರಿಸಿ 29 ದಾಖಲೆಗಳನ್ನು ಗುರುತಿಸಲಾಗಿತ್ತು. ಡಿಎನ್‌ಎ ವರದಿಗಳು, ಸಾಕ್ಷ್ಯ, ಪೂರಕ ಸಾಕ್ಷ್ಯ ಪರಿಗಣಿಸಿ ಹಾಗೂ ವಾದ ವಿವಾದ ಆಲಿಸಿದ ನ್ಯಾಯಾಲಯವು ಆರೋಪಿ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿದೆ.

ಅದರಂತೆ  ನ್ಯಾಯಾಧೀಶರಾದ ಮಾನು ಕೆ.ಎಸ್.ಅವರು ಆರೋಪಿಗೆ ಭಾ.ದಂ.ಸಂ. ಕಲಂ 376(2)(ಎನ್) ಮತ್ತು ಕಲಂ 6 ಪೊಕ್ಸೋ ಕಾಯಿದೆಯಂತೆ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿದ್ದಾರೆ. ದಂಡದ ಹಣವನ್ನು ನೊಂದ ಬಾಲಕಿಗೆ ಪಾವತಿಸುವಂತೆ ಆದೇಶಿಸಿದ್ದಾರೆ. ಅಲ್ಲದೆ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 357 (ಎ) ಪ್ರಕಾರ ಮತ್ತು ಸಂತ್ರಸ್ತರ ಪರಿಹಾರ ಯೋಜನೆಯಡಿಯಲ್ಲಿ ನೊಂದ ಬಾಲಕಿಗೆ ಹೆಚ್ಚುವರಿಯಾಗಿ 1,50,000 ರೂ. ಹಾಗೂ ನೊಂದ ಬಾಲಕಿಯ ಮಗುವಿಗೆ 3 ಲ.ರೂ. ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಕೆ.ಬದರಿನಾಥ ನಾಯರಿ ವಾದಿಸಿದ್ದರು.

Related posts

ಬಿಯರ್ ಬಾಟಲಿಯಿಂದ ಇರಿದು ಚಿಕ್ಕಪ್ಪನನ್ನೇ ಕೊಲೆಗೈದ ಯುವಕ

Suddi Udaya

ಕಾಡು ಪ್ರಾಣಿಗಳನ್ನು ಹೆದರಿಸಲು ಕೋವಿಯಿಂದ ಹಾರಿಸಿದ ಗುಂಡು ತಾಗಿ ಗಂಭೀರ ಗಾಯ

Suddi Udaya

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಥಾರ್

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ತಲೆಮರೆಸಿಕೊಂಡಿದ್ದ ಪಡಂಗಡಿ ನೌಷದ್ ಹಾಗೂ ಮತ್ತೊರ್ವ ಆರೋಪಿ ಅಬ್ದುಲ್ ನಾಸಿರ್ ಬಂಧನ

Suddi Udaya

ಕಂಬಳ ನಿರೂಪಕರಿಂದ ಛಾಯಾಗ್ರಾಹಕ ವೃತ್ತಿಯ ಬಗ್ಗೆ ಆಕ್ಷೇಪಾರ್ಹ ಮಾತು: ಛಾಯಾಗ್ರಾಹಕರ ಆಕ್ರೋಶ ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿಯವರಿಗೆ ದೂರು

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya
error: Content is protected !!