27.8 C
ಪುತ್ತೂರು, ಬೆಳ್ತಂಗಡಿ
May 19, 2025
ಅಪರಾಧ ಸುದ್ದಿ

ಬಾಲಕಿ ಮೇಲೆ ಅತ್ಯಚಾರ ಪ್ರಕರಣ ಬೆಳ್ತಂಗಡಿ ಆರೋಪಿಗೆ ಕಠಿಣ ಶಿಕ್ಷೆ

ಮಂಗಳೂರು; ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ತಂಗಡಿಯ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ  ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಬೆಳ್ತಂಗಡಿ ತಾಲೂಕು ಕೊಕ್ರಾಡಿಯ ಯೋಗೀಶ (26) ಶಿಕ್ಷೆಗೊಳಗದ ಆರೋಪಿ.

ಆರೋಪಿ ಯೋಗೀಶ 2020ರಲ್ಲಿ ಆರೋಪಿ ಬಾಲಕಿಯನ್ನು ಪುಸಲಾಯಿಸಿಕೊಂಡು ಕಾಡಿಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದ.ಪರಿಣಾಮ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸ್ ವೃತ್ತ ನಿರೀಕ್ಷಕ ಶಿವ ಕುಮಾರ್ ಬಿ. ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. 13 ಸಾಕ್ಷಿದಾರರನ್ನು ವಿಚಾರಿಸಿ 29 ದಾಖಲೆಗಳನ್ನು ಗುರುತಿಸಲಾಗಿತ್ತು. ಡಿಎನ್‌ಎ ವರದಿಗಳು, ಸಾಕ್ಷ್ಯ, ಪೂರಕ ಸಾಕ್ಷ್ಯ ಪರಿಗಣಿಸಿ ಹಾಗೂ ವಾದ ವಿವಾದ ಆಲಿಸಿದ ನ್ಯಾಯಾಲಯವು ಆರೋಪಿ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿದೆ.

ಅದರಂತೆ  ನ್ಯಾಯಾಧೀಶರಾದ ಮಾನು ಕೆ.ಎಸ್.ಅವರು ಆರೋಪಿಗೆ ಭಾ.ದಂ.ಸಂ. ಕಲಂ 376(2)(ಎನ್) ಮತ್ತು ಕಲಂ 6 ಪೊಕ್ಸೋ ಕಾಯಿದೆಯಂತೆ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿದ್ದಾರೆ. ದಂಡದ ಹಣವನ್ನು ನೊಂದ ಬಾಲಕಿಗೆ ಪಾವತಿಸುವಂತೆ ಆದೇಶಿಸಿದ್ದಾರೆ. ಅಲ್ಲದೆ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 357 (ಎ) ಪ್ರಕಾರ ಮತ್ತು ಸಂತ್ರಸ್ತರ ಪರಿಹಾರ ಯೋಜನೆಯಡಿಯಲ್ಲಿ ನೊಂದ ಬಾಲಕಿಗೆ ಹೆಚ್ಚುವರಿಯಾಗಿ 1,50,000 ರೂ. ಹಾಗೂ ನೊಂದ ಬಾಲಕಿಯ ಮಗುವಿಗೆ 3 ಲ.ರೂ. ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಕೆ.ಬದರಿನಾಥ ನಾಯರಿ ವಾದಿಸಿದ್ದರು.

Related posts

ಗೂಡ್ಸ್ ಟೆಂಪೋ ಡಿಕ್ಕಿ ದ್ವಿಚಕ್ರ ಸವಾರ ಸಾವು

Suddi Udaya

ಕೆಎಸ್ ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ ಹಾಗೂ ದಂಡ ಪ್ರಕಟ

Suddi Udaya

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಅಬಕಾರಿ ದಳ ದಾಳಿ ಶೇಖರಿಸಿಟ್ಟಿದ್ದ ರೂ.29 ಸಾವಿರ ಮದ್ಯ ವಶಕ್ಕೆ : ಆರೋಪಿ ಬಂಧನ

Suddi Udaya

ಬೆಳ್ತಂಗಡಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯ ಹಣೆಗೆ ಮುತ್ತಿಟ್ಟ ಯುವಕ

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya
error: Content is protected !!