September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಅರ್ಥಶಾಸ್ತ್ರ ಹಾಗೂ ಗ್ರಾಮೀಣಾಭಿವೃದ್ದಿ ವಿಭಾಗದ ವಿಸ್ತೃತ ಚಟುವಟಿಕೆಯ ಅಂಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಕೇಂದ್ರ ಸರ್ಕಾರದ ಬಜೆಟ್ ಮೇಲಿನ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ ನಡೆಯಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಅರ್ಥಶಾಸ್ತ್ರ ಹಾಗೂ ಗ್ರಾಮೀಣಾಭಿವೃದ್ದಿ ವಿಭಾಗದ ಮುಖ್ಯಸ್ಥ ಡಾ. ಗಣರಾಜ್. ಕೆ ಅವರು ಕೇಂದ್ರ ಬಜೆಟಿನ ಮುಖ್ಯಾಂಶಗಳ ಬಗ್ಗೆ ವಿಸ್ತೃತವಾಗಿ ತಿಳಿಸಿದರು.

ತೃತೀಯ ಬಿ.ಎ ವಿದ್ಯಾರ್ಥಿಗಳಾದ ಸಿಂಚನಾ ಭಾರತೀ , ಸಮೀರ್ ಹಾಗೂ ಶ್ರಾವ್ಯಾ ಅವರು ಬಜೆಟ್ ನಲ್ಲಿ ಪ್ರಸ್ತಾಪಿತ ಶೈಕ್ಷಣಿಕ , ಉದ್ಯೋಗ ಹಾಗೂ ಕೌಶಲ್ಯ , ತಂತ್ರಜ್ಞಾನ , ಉದ್ಯೋಗ , ಕೃಷಿ , ಕೈಗಾರಿಕೆ ಇತ್ಯಾದಿ ಪ್ರಮುಖ ಅಂಶಗಳ ಬಗ್ಗೆ ಬೆಳಕು ಚೆಲ್ಲಿದರು. ವಿದ್ಯಾರ್ಥಿಗಳಿಂದ ಚರ್ಚೆ ಕೂಡ ನಡೆಯಿತು.

ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಅಧ್ಯಕ್ಷತೆ ವಹಿಸಿದ್ದರು. ರಾ. ಸೇ ಯೋಜನೆಯ ಸಹ ಯೋಜನಾಧಿಕಾರಿ ಹಾಗೂ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ಪದ್ಮಶ್ರೀ ರಕ್ಷಿತ್ ಅವರು ಸ್ವಾಗತಿಸಿ ನಿರೂಪಿಸಿದರು.

Related posts

ಮಚ್ಚಿನ: ಕುತ್ತಿನ ಸರಕಾರಿ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಡಿ.17-19: ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಕ್ಷೇತ್ರದ ಷಷ್ಠೀ ಮಹೋತ್ಸವ

Suddi Udaya

ಗುರುವಾಯನಕೆರೆ: ದ.ಕ. ಜಿಲ್ಲಾ ಸಹಕಾರ ಭಾರತಿ ಮಹಿಳಾ ಅಭ್ಯಾಸ ವರ್ಗ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಭೇಟಿ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರ್: ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತರಬೇತಿ ಕಾರ್ಯಾಗಾರ, ಸಾಧಕರಿಗೆ ಸನ್ಮಾನ

Suddi Udaya

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

Suddi Udaya
error: Content is protected !!