ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯು ಆ.3 ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಶಿಕ್ಷಕ ವೃಂದದವರು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭವಾಯಿತು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ರವರು ವಹಿಸಿದ್ದರು. ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಕ್ಕಳಿಗೆ ತಂದೆ, ತಾಯಿ ಮತ್ತು ಗುರು ಇವರೆಲ್ಲರೂ ಪ್ರಮುಖವಾದವರು, ನಿಮ್ಮ ವಿಶ್ವಾಸವನ್ನು ನಮ್ಮ ಕೈಲಾದಷ್ಟು ಮಟ್ಟಿಗೆ ನೆರವೇರಿಸುತ್ತೇವೆ ಎಂದು ಭರವಸೆಯನ್ನು ನೀಡಿ, ಮಕ್ಕಳಿಗೆ ಪರಸ್ಪರ ಪ್ರೀತಿಸುವ, ಗೌರವಿಸುವ ತರಬೇತಿಯನ್ನು ಹೆತ್ತವರು ನೀಡಬೇಕೆಂದು ಹೇಳಿದರು.

ಸಭೆಗೆ ಸಂಪನ್ಮೂಲ ವ್ಯಕ್ತಿಗಳಾಗಿ ಸಹ ಪ್ರಾಧ್ಯಾಪಕರು, ಮಕ್ಕಳ ವಿಭಾಗ ಫಾದರ್ ಮುಲ್ಲರ್ ಆಸ್ಪತ್ರೆ ಕಂಕನಾಡಿಯ ಡಾ| ಚಂದನಾ ಪೈರವರು ಆಗಮಿಸಿ “ಮಕ್ಕಳ ಆರೋಗ್ಯ, ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಪೋಷಕರ ಪಾತ್ರ” ಎಂಬುದರ ಬಗ್ಗೆ ಮಾಹಿತಿಯನ್ನು ನೀಡಿದರು. ಶ್ರೀಮತಿ ಟ್ರೆಸ್ಸಿ ಲೋಬೋ ರವರು ಸಂಪನ್ಮೂಲ ವ್ಯಕ್ತಿಗಳ ಪರಿಚಯವನ್ನು ಸಭೆಗೆ ಮಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ|ದೀಪಕ್ ಲಿಯೋ ಡೇಸರವರು ಶಾಲಾ ನಿಯಮಗಳು ಹಾಗೂ ಹೆತ್ತವರ ಸಲಹೆ ಸೂಚನೆಗಳಿಗೆ ಉತ್ತರವನ್ನು ನೀಡಿದರು.

ಶಿಕ್ಷಕ-ರಕ್ಷಕ ಎಲ್ಲಾ ಮಾಜಿ ಪದಾಧಿಕಾರಿಗಳಿಗೆ ಗಿಡವನ್ನು ನೀಡುವುದರ ಮೂಲಕ ಧನ್ಯವಾದಗಳನ್ನು ಅರ್ಪಿಸಲಾಯಿತು. 2024-25ನೇ ಶೈಕ್ಷಣಿಕ ಸಾಲಿನ ಪದಾಧಿಕಾರಿಗಳ ಚುನಾವಣೆಯನ್ನು ಮುಖ್ಯೋಪಾಧ್ಯಾಯರಾದ ವಂ|ಸ್ವಾ|ದೀಪಕ್ ಲಿಯೋ ಡೇಸರವರು ನೆರವೇರಿಸಿ ನಂತರ ದೀಪ ಬೆಳಗಿಸುವುದರ ಮೂಲಕ 2024-25 ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷರಕ್ಷಕ ಸಂಘವನ್ನು ಉದ್ಘಾಟಿಸಲಾಯಿತು. ಎರಡನೇ ಬಾರಿಗೆ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ವಿನಯ್ ಡಿಸೋಜ ರವರು ಮಾತನಾಡಿ ಶಾಲೆಯ ಏಳಿಗೆಗೆ ಶ್ರಮಿಸುವುದಾಗಿ ಭರವಸೆಯನ್ನಿತ್ತರು. ನೂತನವಾಗಿ ನೇಮಕಗೊಂಡ ಎಲ್ಲಾ ಪದಾಧಿಕಾರಿಗಳಿಗೆ ಗಿಡವನ್ನು ನೀಡುವುದರ ಮೂಲಕ ಅಭಿನಂದಿಸಲಾಯಿತು.

ಶಾಲಾ ಸಹಶಿಕ್ಷಕಿಯರಾದ ಶ್ರೀಮತಿ ರಮ್ಯಾಲತಾ ಮತ್ತು ಶೀಮತಿ ಸವಿತಾ ರವರು ಶೈಕ್ಷಣಿಕ ವರ್ಷದ ಸಭೆಯ ವರದಿಯನ್ನು ಮಂಡಿಸಿದರು. ಸಹ ಶಿಕ್ಷಕಿಯಾದ ಶೀಮತಿ ಎಲಿಜಾ ಶಾಂತಿರವರು ಶೈಕ್ಷಣಿಕ ಸಾಲಿನ ಲೆಕ್ಕಪತ್ರವನ್ನು ಸಭೆಗೆ ಮಂಡಿಸಿದರು. ಸಹ ಶಿಕ್ಷಕಿಯರಾದ ಶ್ರೀಮತಿ ಐಡ ಡಿಕುನ್ಹಾ ಮತ್ತು ಶ್ರೀಮತಿ ಮಮತಾರವರು ಕಾರ್ಯಕ್ರಮವನ್ನು ನಿರೂಪಿಸಿ, ಶ್ರೀಮತಿ ವಿನ್ನಿ ಲೋಬೋ ರವರು ಸ್ವಾಗತಿಸಿ, ಕುಮಾರಿ ಜುವರಿಯರವರು ಧನ್ಯವಾದವನ್ನು ಸಮರ್ಪಿಸಿದರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಉಜಿರೆಯಲ್ಲಿ 5ನೇ ವರ್ಷದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ

Suddi Udaya

ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ ಮತ್ತೊಮ್ಮೆ ಶ್ರೇಷ್ಠತೆ ಸಾಬೀತು

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಕಡಿರುದ್ಯಾವರ :ಎರ್ಮಾಲ್ ಪಲ್ಕೆ ಸರಕಾರಿ ಬಾವಿಯಲ್ಲಿ ಪತ್ತೆಯಾದ ಶವ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವರಿಗೆ ಸೀಯಾಳ ಅಭಿಷೇಕ ಹಾಗೂ ವಿಶೇಷ ಪೂಜೆ

Suddi Udaya
error: Content is protected !!