April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯಿಂದ ಆಟಿಕೂಟ ಆಚರಣೆ

ಬೆಳ್ತಂಗಡಿ:ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯ ವತಿಯಿಂದ ಆ.4 ರಂದು ಉಜಿರೆಯ ಅರಿಪಾಡಿ ಮಠದ ಕಲಾವೇದಿಕೆಯಲ್ಲಿ ಆಟಿಕೂಟವನ್ನು ಹಮ್ಮಿಕೊಳ್ಳಲಾಯಿತು.

ಬೆಳ್ತಂಗಡಿ ಕೂಟ ಮಹಾ ಜಗತ್ತಿನ ಅಧ್ಯಕ್ಷ ವಿಶ್ವನಾಥ ಹೊಳ್ಳರವರು ದೀಪ ಬೆಳಗಿಸಿ ಆಟಿಕೂಟಕ್ಕೆ ಚಾಲನೆ ನೀಡಿದರು.

ನಂತರ ಆಟಿಕೂಟದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.ಮಹಿಳಾ ವೇದಿಕೆಯ ಸದಸ್ಯರಾದಂತಹ ವಿದ್ಯಾಶ್ರೀ ಅಡೂರ್ ಅವರು ಸ್ಪರ್ಧೆಗಳನ್ನು ನಿರ್ವಹಿಸಿದರು. ಮಹಿಳಾ ವೇದಿಕೆಯ ಅನೇಕ ಸದಸ್ಯರು ತುಳುನಾಡಿನ ಖಾದ್ಯಗಳನ್ನು ತಮ್ಮ ತಮ್ಮ ಮನೆಗಳಲ್ಲಿ ತಯಾರಿಸಿ ತಂದು ಕಾರ್ಯಕ್ರಮದಲ್ಲಿ ಹಂಚಿಕೊಂಡು ತಿಂದು,ತಿನಿಸಿ ಸಂಭ್ರಮ ಪಟ್ಟರು.

ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಿಶ್ವನಾಥ ಹೊಳ್ಳ ವಹಿಸಿದ್ದರು.ಮುಖ್ಯ ಅಥಿತಿಗಳಾಗಿ ಜಯಂತಿ ಪುರಂದರ್,ಕೇಂದ್ರ ಖಜಾಂಜಿ ವಾಸುದೇವ ಸೋಮಯಾಜಿ,ಮಹಿಳಾ ವೇದಿಕೆಯ ಅಧ್ಯಕ್ಷೆ ನಳಿನಿ ಹೊಳ್ಳ ಉಪಸ್ಥಿತರಿದ್ದರು.

ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಇಂದಿರಾ ಹೊಳ್ಳ ಪ್ರಾರ್ಥನೆ ಹಾಡಿದರು.ಸುಜಾತ ರಾವ್ ಸ್ವಾಗತಿಸಿದರು,ಮಹಿಳಾ ವೇದಿಕೆಯ ಕಾರ್ಯದರ್ಶಿ ಅಕ್ಷತಾ ಅಡೂರ್ ನಿರೂಪಿಸಿದರು. ಗೀತಾ ವಿ ರಾವ್ ಆಟಿಯ ಮಹತ್ವವನ್ನ ವಿವರಿಸಿದರು.ಅಖಿಲ ಪ್ರಕಾಶ್ ನಾರಾಯಣ್ ಖಾದ್ಯಗಳನ್ನು ತಯಾರಿಸಿ ತಂದವರ ಪಟ್ಟಿಯನ್ನು ಓದಿ,ಆಶಾ ಅಡೂರ್ ವಂದಿಸಿದರು

ಹೆಚ್ಚಿನ ಸಂಖ್ಯೆಯಲ್ಲಿ ಕೂಟ ಮಹಾಜಗತ್ತಿನ ಪುರುಷರು, ಮಹಿಳೆಯರು ಮತ್ತು ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು

Related posts

ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ “ಪೆರ್ಲ ಬೈಪಾಡಿ ಊರುದ ಭಕ್ತಿದ ಎಸಲ್” ತುಳು ಆಡಿಯೋ & ವಿಡಿಯೋ ಆಲ್ಬಮ್ ಬಿಡುಗಡೆ

Suddi Udaya

ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಅಕ್ಕಮ್ಮ ರವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!