24.3 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

ವೇಣೂರು: ಇಲ್ಲಿನ ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ 2024-25ನೇ ಸಾಲಿನ ಶಿಕ್ಷಕ – ರಕ್ಷಕ ಸಂಘದ ಸಭೆಯು ಆ. 03 ರಂದು ನಡೆಯಿತು.

ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಶಾಲಾ ಶಿಕ್ಷಕ – ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಶ್ರೀಮತಿ ಸುಜಾತ, ಉಪಾಧ್ಯಕ್ಷರಾಗಿ ವಸಂತ ಮತ್ತು ಭಾಗ್ಯ, ಕೋಶಾಧಿಕಾರಿಯಾಗಿ ಮುರಳಿ ಕೃಷ್ಣ ಭಟ್, ಕಾರ್ಯದರ್ಶಿಯಾಗಿ ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಅಕ್ಷತ ಹಾಗೂ 10 ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.

ಶಾಲಾ ಸಂಚಾಲಕರಾದ ಅಶ್ವಿತ್ ಕುಲಾಲ್ ಶಾಲಾ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ವಿವರವಾಗಿ ತಿಳಿಸಿದರು. ಹಾಗೆ ಮೊಬೈಲ್ ಬಳಕೆಯ ದುರುಪಯೋಗದ ಬಗ್ಗೆ ಮನವರಿಕೆ ಮಾಡಿದರು. ಈ ಸಭೆಯ ಅಧ್ಯಕ್ಷ ಸ್ಥಾನವನ್ನು ವಹಿಸಿದಂತಹ ಕುಂಭಶ್ರೀ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಗಿರೀಶ್ ಕೆ.ಎಚ್ ಹಾಡಿನ ಮೂಲಕ ಪೋಷಕರು ಮತ್ತು ಶಿಕ್ಷಕರ ಕರ್ತವ್ಯವನ್ನು ತಿಳಿಸಿದರು. ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪವಿತ್ರ ಕುಮಾರಿ ಪ್ರಾಸ್ತವಿಕವಾಗಿ ಮಾತನಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಶಿಕ್ಷಕರ ಮತ್ತು ಪೋಷಕರ ಜವಾಬ್ದಾರಿಯನ್ನು ತಿಳಿಸಿದರು. ಸತತ 11ನೇ ಬಾರಿ ಎಸ್ ಎಸ್ ಎಲ್ ಸಿ ಯಲ್ಲಿ ನೂರು ಶೇಕಡ ಫಲಿತಾಂಶವನ್ನು ಪಡೆದಿದ್ದು, ಕಳೆದ ವರ್ಷ ಎಸ್ ಎಸ್ ಎಲ್ ಸಿ ಗೆ ಬೋಧಿಸಿದಂತಹ ಶಿಕ್ಷಕರಿಗೆ ಅಭಿನಂದನೆಯನ್ನು ಸಲ್ಲಿಸಲಾಯಿತು.

ಸಭೆಯಲ್ಲಿ ಕುಂಭಶ್ರೀ ವೈಭವ ಸಮಿತಿಯ ಮಾಜಿ ಅಧ್ಯಕ್ಷರಾದ ಹರೀಶ್ ಪೊಕ್ಕಿ, ಶಿಕ್ಷಕ ರಕ್ಷಕ ಸಂಘದ ಮಾಜಿ ಅಧ್ಯಕ್ಷರಾದ ಜಗದೀಶ್ ಮತ್ತು ಗಣೇಶ್ ಕುಂದರ್ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್. ಎನ್. ರಾವ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಮತ್ತು ಪೋಷಕರು ಉಪಸ್ಥಿತರಿದ್ದರು. ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಅಕ್ಷತ ಸ್ವಾಗತಿಸಿ, ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕಿ ಶ್ರೀಮತಿ ಗೌತಮಿ ಹಾಗೂ ಶ್ವೇತಾ ಅಶೋಕ್ ನಿರೂಪಿಸಿ , ಹಿರಿಯ ಪ್ರಾಥಮಿಕ ವಿಭಾಗದ ಶಿಕ್ಷಕಿ ವಾಣಿ ವಂದಿಸಿದರು.

Related posts

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನಿಯುಕ್ತಿ

Suddi Udaya

ಕನಾ೯ಟಕ ದಲಿತ ಚಳುವಳಿಗೆ 50ರ ಸಂಭ್ರಮ: ಬೆಳ್ತಂಗಡಿಯಲ್ಲಿ ವಿವಿಧ ದಲಿತ ಸಂಘಟನೆಗಳ ಸಹಭಾಗಿತ್ವದಲ್ಲಿ ‘ಕನಾ೯ಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶಕ್ಕೆ ಚಾಲನೆ; ದಲಿತ ಸಾಂಸ್ಕೃತಿಕ ವೈವಿಧ್ಯ ಕಾಯ೯ಕ್ರಮ

Suddi Udaya

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

Suddi Udaya

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮ

Suddi Udaya
error: Content is protected !!