37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ 60 ಅಭಿನಂದನಾ ಸಮಾರಂಭ

ಬಳ್ತಂಗಡಿ: ಒಬ್ಬ ವ್ಯಕ್ತಿ ಹತ್ತು ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರೆ ಅದು ರಾಮಕೃಷ್ಣ ಭಟ್ಟರ ವ್ಯಕ್ತಿತ್ವ. ರಾಮಕೃಷ್ಣ ಭಟ್ಟರು ನಿವೃತ್ತಿಯಾಗಿ ಕೇವಲ 4 ದಿವಸಗಳಲ್ಲಿ ಅಭಿನಂದನಾ ಗ್ರಂಥ ಬಿಡುಗಡೆಗೊಂಡಿರುವುದು ಇದರ ಹಿಂದೆ ಡಾ. ಮುರಲೀಮೋಹನ್ ಚೂಂತಾರುರವ ಶ್ರಮ ಎದ್ದು ಕಾಣುತ್ತದೆ. ಸುಮಾರು 600ಕ್ಕೂ ಹೆಚ್ಚು ಲೇಖನಗಳು ಬೇರೆ ಬೇರೆ ಮಾಧ್ಯಮಗಳಲ್ಲಿ ಪ್ರಕಟಗೊಂಡಿರುವುದು, ಪುಸ್ತಕಗಳನ್ನು ಬರೆದಿರುವುದು ರಾಮಕೃಷ್ಣ ಭಟ್ಟರು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗೆ ಸಾಕ್ಷಿಯಾಗಿದೆ.

ರಾಮಕೃಷ್ಣ ಭಟ್ಟರು ಸುಪ್ತ ಮನಸ್ಸಿನ ಹಲವು ಮುಖಗಳನ್ನು ಹೊಂದಿರುವ ವಿಶೇಷ ಪ್ರತಿಭೆ ಎಂದು ಇತಿಹಾಸ ತಜ್ಞ, ಲೇಖಕ ಪುಂಡಿಕಾಯಿ ಗಣಪಯ್ಯ ಭಟ್ ಹೇಳಿದರು. ಅವರು ಆ. 4ರಂದು ಚೊಕ್ಕಾಡಿಯ ಶ್ರೀರಾಮ ದೇವಾಲಯದ ದೇಸೀ ಸಭಾಭವನದಲ್ಲಿ ಚೂಂತಾರು ಸರೋಜಿನಿ ಭಟ್‌ ಪ್ರತಿಷ್ಠಾನ ಮಂಗಳೂರು, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸುಳ್ಯ ಘಟಕ, ಜೇಸಿಐ ಬೆಳ್ಳಾರೆ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಬೆಳಾಲು ಶ್ರೀ ಧ.ಮಂ. ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ 60 ಅಭಿನಂದನಾ ಸಮಾರಂಭ ಮತ್ತು ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದ ಅಭಿನಂದನಾ ಭಾಷಣದಲ್ಲಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಭಿನಂದನಾ ಸಮಿತಿ ಅಧ್ಯಕ್ಷ ಆನೆಕಾರ ಗಣಪಯ್ಯ ವಹಿಸಿದ್ದರು.
ಖ್ಯಾತ ಸಾಹಿತಿ ಸುಬ್ರಾಯ ಚೊಕ್ಕಾಡಿ ಅಭಿನಂದನಾ ಗ್ರಂಥ ಬಿಡುಗಡೆ ಮಾಡಿ ಮಾತನಾಡುತ್ತಾ ರಾಮಕೃಷ್ಣ ಅಭಿನಂದನಾ ಗ್ರಂಥ ಅವರ ಬಹುಮುಖ ಪ್ರತಿಭೆಯನ್ನು ಅನಾವರಣಗೊಳಿಸಿದೆ. ಅವರ ಜೀವನದ ಸಾಧನೆಗಳ ದಾಖಲೆಯಾಗಿದೆ. ಅವರ ವ್ಯಕ್ತಿತ್ವದಲ್ಲಿ ರಾಮ ಮತ್ತು ಕೃಷ್ಣರ ಆದರ್ಶಗಳನ್ನು ಬೆಳೆಸಿಕೊಂಡಿದ್ದಾರೆ ಎಂದರು. ಕ.ಸಾ.ಪ. ಅಧ್ಯಕ್ಷ ಚಂದ್ರಶೇಖರ ಪೇರಾಲು ಮತ್ತು ಜೇಸಿಐ ಬೆಳ್ಳಾರೆ ಅಧ್ಯಕ್ಷ ಜಗದೀಶ್ ರೈ ಪೆರುವಾಜೆ ಅತಿಥಿಗಳಾಗಿ ಭಾಗವಹಿಸಿದ್ದರು. ನಿವೃತ್ತ ಬಿ.ಎಸ್.ಎನ್.ಎಲ್ ಉದ್ಯೋಗಿ ರಾಮ ಪೆರುವಾಜೆ, ಬೆಳಾಲು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡ ಮತ್ತು ದ.ಕ. ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಮಹಮ್ಮದ್ ರಿಯಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಅಭಿನಂದನಾ ಮಾತುಗಳನ್ನಾಡಿದರು.


ಶ್ರೀರಾಮ ದೇವಾಲಯದ ಶ್ರೀ ರಾಮ ಸೇವಾ ಸಮಿತಿ ಅಧ್ಯಕ್ಷ ಮಹೇಶ್ ಭಟ್ ಚೂಂತಾರು ಸ್ವಾಗತಿಸಿ, ಡಾ. ಮುರಲೀಮೋಹನ್ ಚೂಂತಾರು ಪ್ರಸ್ತಾವಿಕ ಮಾತುಗಳನ್ನಾಡಿದರು. ಜೇಸಿಐ ಬೆಳ್ಳಾರೆ ಪೂರ್ವಾಧ್ಯಕ್ಷ ಪ್ರದೀಪ್ ಕುಮಾರ್ ರೈ ಪನ್ನೆ ವಂದಿಸಿದರು. ಪ್ರಕಾಶ್ ಮೂಡಿತ್ತಾಯ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಉಪಹಾರ ನೀಡಲಾಯಿತು.

Related posts

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

Suddi Udaya

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

Suddi Udaya

ಬಂಟರ ಯಾನೆ ನಾಡವರ ಸಂಘ ಉಜಿರೆ ವಲಯ ಸಮಿತಿ ವತಿಯಿಂದ ಮುಂಡಾಜೆಯ ಶ್ರೀಮತಿ ಗುಣವತಿ ಶೆಟ್ಟಿಯವರ ಗೃಹ ನಿರ್ಮಾಣಕ್ಕೆ ಧನ ಸಹಾಯ

Suddi Udaya

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya

ಅಳದಂಗಡಿ: ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!