39.6 C
ಪುತ್ತೂರು, ಬೆಳ್ತಂಗಡಿ
April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.20: ಉಜಿರೆಯಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ : ಸಮಾಲೋಚನಾ ಸಭೆ

ಉಜಿರೆ: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕದ ಆಶ್ರಯದಲ್ಲಿ ಆ.20 ರಂದು ಉಜಿರೆಯಲ್ಲಿ ಶಾರದಾ ಮಂಟಪದಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ ನಡೆಯಲಿದ್ದು ಪೂರ್ವಸಿದ್ಧತೆಗಳ ಬಗ್ಯೆ ಸಮಾಲೋಚನಾ ಸಭೆಯು ಆ. 3ರಂದು ಬೆಳ್ತಂಗಡಿಯಲ್ಲಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.


ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲ ಶೆಟ್ಟಿ ಸಮಾವೇಶದ ಬಗ್ಯೆ ಸವಿವರ ಮಾಹಿತಿ ನೀಡಿ ವಿವಿಧ ಊರುಗಳಿಗೆ ವಿಭಾಗ ಸಂಘಟಕರನ್ನು ಆಯ್ಕೆ ಮಾಡಲಾಯಿತು. ಉಜಿರೆ, ಧರ್ಮಸ್ಥಳ, ಬೆಳ್ತಂಗಡಿ, ಮಡಂತ್ಯಾರು, ನಾರಾವಿ, ನಿಡ್ಲೆ, ಗುರುವಾಯನಕೆರೆ ವಲಯಗಳಿಗೆ ತಲಾ ನಾಲ್ಕು ಮಂದಿಯAತೆ ಸಂಘಟಕರನ್ನು ಆಯ್ಕೆ ಮಾಡಿ ನಿವೃತ್ತರ ಸದಸ್ಯತ್ವ ನೋಂದಣಿಗೆ ಸಹಕರಿಸುವಂತೆ ಕೋರಲಾಯಿತು.


ಸಂಘದ ಕಾರ್ಯದರ್ಶಿ ವಿಶ್ವಾಸ ರಾವ್ ವರದಿ ವಾಚಿಸಿದರು. ವಸಂತ ಸುವರ್ಣ ಪಿಂಚಣಿ ಬಗ್ಯೆ ಮಾಹಿತಿ ನೀಡಿದರು. ಕೋಶಾಧಿಕಾರಿ ಜಗನ್ನಿವಾಸ ರಾವ್ ಲೆಕ್ಕಪತ್ರದ ವಿವರ ನೀಡಿದರು.


ಸನ್ಮತ್ ಕುಮಾರ್ ನಾರಾವಿ ಸ್ವಾಗತಿಸಿದರು. ಕುಸುಮಾವತಿ ಧನ್ಯವಾದವಿತ್ತರು.

Related posts

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

Suddi Udaya

ಅಯೋಧ್ಯೆ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆಯ ಪ್ರಯುಕ್ತ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ

Suddi Udaya

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ವೈಭವ: ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರಿಂದ ವಿವಿಧ ಸಮಿತಿಗಳ ಜೊತೆ ಸಮಾಲೋಚನಾ ಸಭೆ

Suddi Udaya

ಮಚ್ಚಿನ ಅಂಚೆ ಕಚೇರಿ ಹಾಗೂ ಮಚ್ಚಿನ ಗ್ರಾ.ಪಂ. ಸಹಯೋಗದಲ್ಲಿ ಆಧಾರ್ ಸೀಡಿಂಗ್ ಕ್ಯಾಂಪ್

Suddi Udaya

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya
error: Content is protected !!