24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

ಚಾರ್ಮಾಡಿ : ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಆ. 5ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶಾರದಾ ಎ. ರವರ ಅಧ್ಯಕ್ಷತೆಯಲ್ಲಿ ಅಂಬೇಡ್ಕರ್ ಸಮಾಜ ಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಇಲಾಖೆ ನಿರ್ದೇಶಕ ಜೋಸೆಫ್ ರವರು ಗ್ರಾಮ ಸಭೆಯನ್ನು ಮುನ್ನಡೆಸಿ ಮಾತನಾಡಿ ಗ್ರಾಮ ಸಭೆಯಲ್ಲಿ ಉತ್ತಮ ಚರ್ಚೆಗಳು ನಡೆದಿದ್ದು, ಮುಂದಕ್ಕೂ ಈ ರೀತಿಯ ಚರ್ಚೆಗಳು ನಡೆದು ಅಧಿಕಾರಿಗಳನ್ನು ಎಚ್ಚೆತ್ತಿಸುವ ಕೆಲಸವನ್ನು ಮಾಡಬೇಕು ಎಂದರು.

ಹೆಚ್ಚುವರಿ ಪವರ್ ಮ್ಯಾನ್ ನವರನ್ನು ನೇಮಿಸುವಂತೆ ಗ್ರಾಮಸ್ಥರು ಮೆಸ್ಕಾಂ ಇಲಾಖೆಗೆ ಆಗ್ರಹಿಸಿದರು. ವನ್ಯಜೀವಿಗಳ ದಾಳಿ ಆಗುತ್ತಿದ್ದು ಅರಣ್ಯ ಇಲಾಖೆ ಸಮರ್ಪಕವಾದ ಕ್ರಮ ಕೈಗೊಲ್ಲದೆ ಇರುವುದರ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಜಿ. ಸ್ವಾಗತಿಸಿ, ನಿರೂಪಿಸಿ, ಧನ್ಯವಾದವಿತ್ತರು. ಕಾರ್ಯದರ್ಶಿ ಕುಂಞ ಅನುಪಾಲನ ವರದಿ ವಾಚಿಸಿದರು.

Related posts

ಆರಂಬೋಡಿ 137ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ನೂತನ ಅಧ್ಯಕ್ಷರಾಗಿ ಪ್ರಫುಲ್ಲಚಂದ್ರ ಆಯ್ಕೆ

Suddi Udaya

ಕುತ್ಲೂರು: ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಉಚಿತ ಕೃಷಿ ಉಪಕರಣಗಳ ವಿತರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!