ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

Suddi Udaya

ಉಜಿರೆ: ಉಜಿರೆಯ ಎಸ್.ಡಿ.ಎಂ ಪಾಲಿಟೆಕ್ನಿಕ್ ನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣಗಳ ಕುರಿತು ಕಾರ್ಯಾಗಾರವನ್ನು ಆ. 3ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಎಸ್.ಡಿ.ಎಂ ಕಾಲೇಜಿನ ಮನಃಶಾಸ್ತ್ರದ ಪ್ರಾಧ್ಯಾಪಕರಾಗಿರುವ ಡಾ. ಸುಧೀರ್‌ ಕೆ.ವಿ. ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದರು. ಇವರು ವಿದ್ಯಾರ್ಥಿಗಳಿಗೆ ಅನೇಕ ಆಸಕ್ತಿದಾಯಕ ಚಟುವಟಿಕೆಗಳನ್ನು ನೀಡುವ ಮೂಲಕ ವ್ಯಕ್ತಿತ್ವ ವಿಕಸನಗೊಳಿಸುವ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವ ಕಲೆಯನ್ನು ತಿಳಿಸಿಕೊಟ್ಟರು. ಧನಾತ್ಮಕ ಚಿಂತನೆ ಇದ್ದರೆ ಬದುಕನ್ನು ಯೋಗ್ಯ ರೀತಿಯಲ್ಲಿ ರೂಪಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದ ಸಂಯೋಜಕರಾದ ವಿಜ್ಞಾನ ವಿಭಾಗದ ಮುಖ್ಯಸ್ಥ ರಾಜೇಶ್‌ ಕೆ ಎ, ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಆಂಗ್ಲಭಾಷಾ ಉಪನ್ಯಾಸಕ ಶಂಕರ್‌ ಭಟ್‌ ಎಚ್‌ ಆರ್‌ ಕಾರ್ಯಕ್ರಮ ನಿರೂಪಿಸಿದರು.

Leave a Comment

error: Content is protected !!