ಪಡಂಗಡಿ : ಇಲ್ಲಿಯ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಆ.6 ರಂದು ಗ್ರಾ.ಪಂ. ಅಧ್ಯಕ್ಷ ವಸಂತ ಪೂಜಾರಿ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಆವರಣದಲ್ಲಿ ನಡೆಯಿತು.
ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತ ಇಲಾಖೆ ನಿರ್ದೇಶಕ ಜೋಸೆಫ್ ರವರು ಗ್ರಾಮ ಸಭೆಯನ್ನು ಮುನ್ನಡೆಸಿದರು.
ಗ್ರಾಮ ಸಭೆಗೆ ಇಲಾಖಾಧಿಕಾರಿಗಳು ಗುರುತಿನ ಚೀಟಿ ಧರಿಸದೆ ಬಂದಿರುವುದನ್ನು ಪ್ರಶ್ನಿಸಿದ ಗ್ರಾಮಸ್ಥರು ಮುಂದಿನ ಗ್ರಾಮ ಸಭೆಗೆ ಗುರುತಿನ ಚೀಟಿ ಧರಿಸದೆ ಬಂದಲ್ಲಿ ಗ್ರಾಮ ಸಭೆಯಲ್ಲಿ ಕೂರುವುದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಗ್ರಾಮಸ್ಥರಾದ ಕಿಶೋರ್ ಎಚ್ಚರಿಕೆ ನೀಡಿದರು.
ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಪೂಜಾರಿ ಮಾತನಾಡಿ ಕಳೆದ ಗ್ರಾಮ ಸಭೆಗಿಂತ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದು ಖುಷಿಯ ಸಂಗತಿ. ಈ ಬಾರಿಯ ಮಳೆ ಹೆಚ್ಚಾಗಿದ್ದು ವಿಶೇಷವಾಗಿ ಬೆಳ್ತಂಗಡಿ ತಾಲೂಕಿನಲ್ಲಿ ಅನೇಕ ಮನೆ, ತೋಟಗಳಿಗೆ ಹಾನಿಯಾಗಿದೆ ಹಾಗೂ ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ಹಾನಿಯಾದ ಪ್ರದೇಶಗಳಿಗೆ ಸದಸ್ಯರುಗಳು ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳನ್ನು ಬಗೆಹರಿಸಿ ಕೊಡುವುದಕ್ಕೆ ಯಶಸ್ವಿಯಾಗಿದ್ದಾರೆ. ಹೊಸದಾಗಿ ನೇಮಕಗೊಂಡ ಗ್ರಾಮ ಆಡಳಿತ ಅಧಿಕಾರಿ ಯವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಅಭಿನಂದಿಸಿದರು.
ಸದಸ್ಯರಾದ ಸಂತೋಷ್ ಕುಮಾರ್, ಮೀನಾಕ್ಷಿ, ಹಾಮದ್ ಬಾವ, ವನಜಾಕ್ಷಿ, ವಿನೋದ, ಗಾಯತ್ರಿ, ಶಕುಂತಲಾ, ರಿಚಾರ್ಡ್ ಗೋವಿಯಸ್, ಸುಮತಿ ಪಿ, ಅಶೋಕ, ಶುಭಾ, ಕೃಷ್ಣಪ್ಪ, ಯೋಗೀಶ್ ಡಿ.ಪಿ., ಕವಿತಾ, ಹರೀಶ್ ಕುಮಾರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸಫನಾ ಸ್ವಾಗತಿಸಿದರು. ಕಾರ್ಯದರ್ಶಿ ತಾರಾನಾಥ ನಾಯ್ಕ್ ಕೆ. ನಿರೂಪಿಸಿ, ಅನುಪಾಲನ ವರದಿ ವಾಚಿಸಿದರು. ಗ್ರಾ.ಪಂ. ಸದಸ್ಯ ಹಾಮದ್ ಬಾವ ಧನ್ಯವಾದವಿತ್ತರು.