April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

ಪಡಂಗಡಿ : ಇಲ್ಲಿಯ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಆ.6 ರಂದು ಗ್ರಾ.ಪಂ. ಅಧ್ಯಕ್ಷ ವಸಂತ ಪೂಜಾರಿ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಆವರಣದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತ ಇಲಾಖೆ ನಿರ್ದೇಶಕ ಜೋಸೆಫ್ ರವರು ಗ್ರಾಮ ಸಭೆಯನ್ನು ಮುನ್ನಡೆಸಿದರು.

ಗ್ರಾಮ ಸಭೆಗೆ ಇಲಾಖಾಧಿಕಾರಿಗಳು ಗುರುತಿನ ಚೀಟಿ ಧರಿಸದೆ ಬಂದಿರುವುದನ್ನು ಪ್ರಶ್ನಿಸಿದ ಗ್ರಾಮಸ್ಥರು ಮುಂದಿನ ಗ್ರಾಮ ಸಭೆಗೆ ಗುರುತಿನ ಚೀಟಿ ಧರಿಸದೆ ಬಂದಲ್ಲಿ ಗ್ರಾಮ ಸಭೆಯಲ್ಲಿ ಕೂರುವುದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಗ್ರಾಮಸ್ಥರಾದ ಕಿಶೋರ್ ಎಚ್ಚರಿಕೆ ನೀಡಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಪೂಜಾರಿ ಮಾತನಾಡಿ ಕಳೆದ ಗ್ರಾಮ ಸಭೆಗಿಂತ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದು ಖುಷಿಯ ಸಂಗತಿ. ಈ ಬಾರಿಯ ಮಳೆ ಹೆಚ್ಚಾಗಿದ್ದು ವಿಶೇಷವಾಗಿ ಬೆಳ್ತಂಗಡಿ ತಾಲೂಕಿನಲ್ಲಿ ಅನೇಕ ಮನೆ, ತೋಟಗಳಿಗೆ ಹಾನಿಯಾಗಿದೆ ಹಾಗೂ ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ಹಾನಿಯಾದ ಪ್ರದೇಶಗಳಿಗೆ ಸದಸ್ಯರುಗಳು ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳನ್ನು ಬಗೆಹರಿಸಿ ಕೊಡುವುದಕ್ಕೆ ಯಶಸ್ವಿಯಾಗಿದ್ದಾರೆ. ಹೊಸದಾಗಿ ನೇಮಕಗೊಂಡ ಗ್ರಾಮ ಆಡಳಿತ ಅಧಿಕಾರಿ ಯವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಅಭಿನಂದಿಸಿದರು.

ಸದಸ್ಯರಾದ ಸಂತೋಷ್ ಕುಮಾರ್, ಮೀನಾಕ್ಷಿ, ಹಾಮದ್ ಬಾವ, ವನಜಾಕ್ಷಿ, ವಿನೋದ, ಗಾಯತ್ರಿ, ಶಕುಂತಲಾ, ರಿಚಾರ್ಡ್ ಗೋವಿಯಸ್, ಸುಮತಿ ಪಿ, ಅಶೋಕ, ಶುಭಾ, ಕೃಷ್ಣಪ್ಪ, ಯೋಗೀಶ್ ಡಿ.ಪಿ., ಕವಿತಾ, ಹರೀಶ್ ಕುಮಾರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸಫನಾ ಸ್ವಾಗತಿಸಿದರು. ಕಾರ್ಯದರ್ಶಿ ತಾರಾನಾಥ ನಾಯ್ಕ್ ಕೆ. ನಿರೂಪಿಸಿ, ಅನುಪಾಲನ ವರದಿ ವಾಚಿಸಿದರು. ಗ್ರಾ.ಪಂ. ಸದಸ್ಯ ಹಾಮದ್ ಬಾವ ಧನ್ಯವಾದವಿತ್ತರು.

Related posts

ಕಡಬದ ನವ ಜೀವನ ಸದಸ್ಯರಿಂದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರ ಭೇಟಿ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ನಿತ್ಯಶ್ರೀ. ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಹಳೇಪೇಟೆ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ಅಧ್ಯಕ್ಷರಾಗಿ ಸೂರಪ್ಪ ಗಾಂಧಿನಗರ ಅವಿರೋಧವಾಗಿ ಆಯ್ಕೆ

Suddi Udaya

ಮಿತ್ತಬಾಗಿಲು ಕಾಡು ಹಂದಿ ಬೇಟೆ: ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕ್ರೀಡೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಪುತ್ತೂರು ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್: ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya
error: Content is protected !!