24.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಪುಂಜಾಲಕಟ್ಟೆ : ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ ಹಿರಿಯ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ನಿಕಟ ಪೂರ್ವ ಅಧ್ಯಕ್ಷರಾದ ಪ್ರಜ್ವಲ್ ಸಂತೋಷ್ ಮಾತನಾಡಿ, ತಮ್ಮ ಅಧಿಕಾರವಾಧಿಯಲ್ಲಿ ಕಾಲೇಜಿನ ಬೆಳವಣಿಗೆಗೆ ಒತ್ತು ನೀಡಿ ಶ್ರಮಿಸಲಾಗಿದೆ. ಪ್ರಸ್ತುತ ಕಾಲೇಜಿನ ಶಿಕ್ಷಣ ಗುಣಮಟ್ಟ ಉನ್ನತ ದರ್ಜೆಯಲ್ಲಿದ್ದು, ಮತ್ತಷ್ಟು ಬೆಳವಣಿಗೆಗೆ ಪೂರಕವಾಗಿ ಅಭಿವೃದ್ಧಿ ಆಗಲು ಕಾಲೇಜಿನಲ್ಲಿ ಶಿಕ್ಷಣ ಪಡೆದ ಹಿರಿಯ ವಿದ್ಯಾರ್ಥಿಗಳ ಸಹಕಾರ ಅತ್ಯಗತ್ಯ ಎಂದರು. ಸರ್ವತೋಮುಖ ಬೆಳವಣಿಗೆಗೆ ಕೈಗೊಂಡ ಕಾರ್ಯಕ್ರಮಗಳ ವಾರ್ಷಿಕ ಮಂಡನೆಯನ್ನು ನಿಕಟಪೂರ್ವ ಕಾರ್ಯದರ್ಶಿ ರಮೇಶ್ ಮೂಲ್ಯ ಸಭೆಯಲ್ಲಿ ಮಂಡಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮಾಧವ ಎಂ ಮಾತನಾಡಿ, ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ನಿರಂತರ ಸಹಕಾರ ಮತ್ತು ಶ್ರಮವನ್ನು ಸ್ಮರಿಸಿ ಅಭಿನಂದಿಸಿದರು. ಕಾಲೇಜಿಗೆ ಅತಿ ಅವಶ್ಯವಿರುವ ಬಾವಿಗೆ ರಿಂಗ್ ಅಳವಡಿಕೆಗೆ ಬೇಡಿಕೆ ಪ್ರಸ್ತಾಪಿಸಿದರು. ಈ ಬಗ್ಗೆ ಹಿರಿಯ ವಿದ್ಯಾರ್ಥಿಗಳು ಪರಿಶೀಲಿಸಿ, ಸ್ಥಿತಿಯ ಗಂಭೀರತೆಯನ್ನು ಅರಿತು ಬಾವಿ ರಿಂಗ್ ಅಳವಡಿಕೆ ಮಾಡಿಸಿಕೊಡುವುದಾಗಿ ಭರವಸೆ ನೀಡಿದರು.

ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ರಾಜೇಶ್, ಉಪಾಧ್ಯಕ್ಷರಾಗಿ ವಿಪುಲ್, ಕಾರ್ಯದರ್ಶಿಯಾಗಿ ರಮಾಶ್ರೀ, ಜತೆ ಕಾರ್ಯದರ್ಶಿಯಾಗಿ ವನಿತಾ, ಖಜಾಂಚಿಯಾಗಿ ಜಿತೇಶ್ ಕೆ ಹಾಗೂ ಕಾರ್ಯಕಾರಿಣಿ ಸಮಿತಿಯಲ್ಲಿ 17 ಮಂದಿ ಸದಸ್ಯರು ನೂತನ ಪದಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ. ನಿಕಟ ಪೂರ್ವ ಅಧ್ಯಕ್ಷರಾದ ಪ್ರಜ್ವಲ್ ಸಂತೋಷ್ ಅವರು ನೂತನ ಅಧ್ಯಕ್ಷರಾದ ರಾಜೇಶ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಸಭೆಯಲ್ಲಿ ಕಾಲೇಜಿನ ದೈಹಿಕ ನಿರ್ದೇಶಕರಾದ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಸಂಚಾಲಕರಾದ ಡಾ. ಶೈಲೇಶ್, ಗ್ರಂಥಪಾಲಕರಾದ ಪ್ರವೀಣ್ ಹಾಗೂ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕಾರಣಿ ಸಮಿತಿಯ ಸದಸ್ಯ ಸುನಿಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ, ನಿಕಟಪೂರ್ವ ಕಾರ್ಯದರ್ಶಿ ರಮೇಶ್ ಮೂಲ್ಯ ಧನ್ಯವಾದವಿತ್ತರು.

Related posts

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ರಂಗ ತಂಡದಿಂದ ‘ ‘ಇರುವೆ ಪುರಾಣ ‘ ಮಕ್ಕಳ ನಾಟಕ ಪ್ರದರ್ಶನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತ್ತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಗುರಿಪಳ್ಳ ಹಾಗೂ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

Suddi Udaya

ಮಾಲಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya
error: Content is protected !!