29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

ಧರ್ಮಸ್ಥಳ ಗ್ರಾಮದ ಪೊದುಂಬಿಲ ನಾರಿಯದಲ್ಲಿ ವಾಸವಿರುವ ವೆಂಕಪ್ಪ ಹಾಗೂ ಸುಶೀಲರವರ ಮಗಳು ಕುಮಾರಿ ವೇದಾವತಿಯವರು ವಾಹನ ಅಪಘಾತದಲ್ಲಿ ಗಾಯಗೊಂಡಿದ್ದು ಎರಡು ಕಾಲಿನ ಸ್ವಾಧೀನತೆಯನ್ನು ಕಳೆದುಕೊಂಡು ಮಲಗಿದಲ್ಲಿಯೇ ಇರುತ್ತಾರೆ. ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಸದಸ್ಯರಾಗಿದ್ದು, ಸಂಪೂರ್ಣ ಸುರಕ್ಷಾ ಕ್ರಿಟಿಕಲ್ ಇಲ್ನೆಸ್ ಫಂಡ್ ಮುಖಾಂತರ ಧರ್ಮಸ್ಥಳದ ಪೂಜ್ಯರು ಮಂಜೂರು ಮಾಡಿರುವ ಸಹಾಯಧನ ರೂ.20 ಸಾವಿರ ರೂಪಾಯಿಯ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಸುಂದರ ಗೌಡ ಬಜಿಲ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ರೇವತಿ, ಒಕ್ಕೂಟದ ನೂತನ ಅಧ್ಯಕ್ಷರಾದ ರಾಜೇಶ್ ಗೌಡ ಬಜಿಲ, ಒಕ್ಕೂಟದ ಪದಾಧಿಕಾರಿಗಳಾದ ಶ್ರೀಮತಿ ಆಲಿಷಾ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಹಾಗೂ ಸೇವಾಪ್ರತಿನಿಧಿ ಶ್ರೀಮತಿ ವೀಣಾ ರವರು ಉಪಸ್ಥಿತರಿದ್ದರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಭಜನಾ ಮಂಗಲೋತ್ಸವ ಹಾಗೂ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಬಳಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕೊಕ್ಕಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಯಶೋನಮನ ಕಾರ್ಯಕ್ರಮ ಉದ್ಘಾಟನೆ

Suddi Udaya

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

Suddi Udaya

ಕುದ್ಯಾಡಿ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!