September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಪುಂಜಾಲಕಟ್ಟೆ : ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ ಹಿರಿಯ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ನಿಕಟ ಪೂರ್ವ ಅಧ್ಯಕ್ಷರಾದ ಪ್ರಜ್ವಲ್ ಸಂತೋಷ್ ಮಾತನಾಡಿ, ತಮ್ಮ ಅಧಿಕಾರವಾಧಿಯಲ್ಲಿ ಕಾಲೇಜಿನ ಬೆಳವಣಿಗೆಗೆ ಒತ್ತು ನೀಡಿ ಶ್ರಮಿಸಲಾಗಿದೆ. ಪ್ರಸ್ತುತ ಕಾಲೇಜಿನ ಶಿಕ್ಷಣ ಗುಣಮಟ್ಟ ಉನ್ನತ ದರ್ಜೆಯಲ್ಲಿದ್ದು, ಮತ್ತಷ್ಟು ಬೆಳವಣಿಗೆಗೆ ಪೂರಕವಾಗಿ ಅಭಿವೃದ್ಧಿ ಆಗಲು ಕಾಲೇಜಿನಲ್ಲಿ ಶಿಕ್ಷಣ ಪಡೆದ ಹಿರಿಯ ವಿದ್ಯಾರ್ಥಿಗಳ ಸಹಕಾರ ಅತ್ಯಗತ್ಯ ಎಂದರು. ಸರ್ವತೋಮುಖ ಬೆಳವಣಿಗೆಗೆ ಕೈಗೊಂಡ ಕಾರ್ಯಕ್ರಮಗಳ ವಾರ್ಷಿಕ ಮಂಡನೆಯನ್ನು ನಿಕಟಪೂರ್ವ ಕಾರ್ಯದರ್ಶಿ ರಮೇಶ್ ಮೂಲ್ಯ ಸಭೆಯಲ್ಲಿ ಮಂಡಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮಾಧವ ಎಂ ಮಾತನಾಡಿ, ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ನಿರಂತರ ಸಹಕಾರ ಮತ್ತು ಶ್ರಮವನ್ನು ಸ್ಮರಿಸಿ ಅಭಿನಂದಿಸಿದರು. ಕಾಲೇಜಿಗೆ ಅತಿ ಅವಶ್ಯವಿರುವ ಬಾವಿಗೆ ರಿಂಗ್ ಅಳವಡಿಕೆಗೆ ಬೇಡಿಕೆ ಪ್ರಸ್ತಾಪಿಸಿದರು. ಈ ಬಗ್ಗೆ ಹಿರಿಯ ವಿದ್ಯಾರ್ಥಿಗಳು ಪರಿಶೀಲಿಸಿ, ಸ್ಥಿತಿಯ ಗಂಭೀರತೆಯನ್ನು ಅರಿತು ಬಾವಿ ರಿಂಗ್ ಅಳವಡಿಕೆ ಮಾಡಿಸಿಕೊಡುವುದಾಗಿ ಭರವಸೆ ನೀಡಿದರು.

ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ರಾಜೇಶ್, ಉಪಾಧ್ಯಕ್ಷರಾಗಿ ವಿಪುಲ್, ಕಾರ್ಯದರ್ಶಿಯಾಗಿ ರಮಾಶ್ರೀ, ಜತೆ ಕಾರ್ಯದರ್ಶಿಯಾಗಿ ವನಿತಾ, ಖಜಾಂಚಿಯಾಗಿ ಜಿತೇಶ್ ಕೆ ಹಾಗೂ ಕಾರ್ಯಕಾರಿಣಿ ಸಮಿತಿಯಲ್ಲಿ 17 ಮಂದಿ ಸದಸ್ಯರು ನೂತನ ಪದಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ. ನಿಕಟ ಪೂರ್ವ ಅಧ್ಯಕ್ಷರಾದ ಪ್ರಜ್ವಲ್ ಸಂತೋಷ್ ಅವರು ನೂತನ ಅಧ್ಯಕ್ಷರಾದ ರಾಜೇಶ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಸಭೆಯಲ್ಲಿ ಕಾಲೇಜಿನ ದೈಹಿಕ ನಿರ್ದೇಶಕರಾದ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಸಂಚಾಲಕರಾದ ಡಾ. ಶೈಲೇಶ್, ಗ್ರಂಥಪಾಲಕರಾದ ಪ್ರವೀಣ್ ಹಾಗೂ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕಾರಣಿ ಸಮಿತಿಯ ಸದಸ್ಯ ಸುನಿಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ, ನಿಕಟಪೂರ್ವ ಕಾರ್ಯದರ್ಶಿ ರಮೇಶ್ ಮೂಲ್ಯ ಧನ್ಯವಾದವಿತ್ತರು.

Related posts

ದಿವ್ಯಾಂಗರ ಬಾಳಿಗೆ ಬೆಳಕಾದ ಕನ್ಯಾಡಿ ಸೇವಾ ಭಾರತಿ ಸಂಸ್ಥೆಗೆ 20 ವರ್ಷ: ನ.14 : ಸೇವಾನಿಕೇತನದಲ್ಲಿ ನೂತನ ಕಟ್ಟಡಕ್ಕೆ ಭೂಮಿಪೂಜೆ ಹಾಗೂ ಶಿಲಾನ್ಯಾಸ

Suddi Udaya

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶಾಸಕ ಹರೀಶ್ ಪೂಂಜ

Suddi Udaya

ಬೊಳಿಯಾರು ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ: ಆಟೋ ಚಾಲಕ ದಿನೇಶ್‌ರವರನ್ನು ಭೇಟಿಯಾದ ರಕ್ಷಿತ್ ಶಿವರಾಂ

Suddi Udaya

ಉಜಿರೆ: ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಚಾರ್ಮಾಡಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕೋಟ್ಯಾನ್ ಆಯ್ಕೆ

Suddi Udaya
error: Content is protected !!