April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

ಬಂದಾರು : ಬಂದಾರು ಗ್ರಾಮದ ಪೇರಲ್ದಪಲ್ಕೆ ಎಂಬಲ್ಲಿನ ಗುಡ್ಡೆಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ, ಧರ್ಮಸ್ಥಳ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ಕಿಶೋರ್ ಪಿ. ರವರು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದು, ಈ ವೇಳೆ ಕೋಳಿ ಅಂಕದಲ್ಲಿ ನಿರತರಾಗಿದ್ದ ದೇವಪ್ಪ, ಉಮ್ಮನ ಗೌಡ, ಪರಮೇಶ್ವರ, ರಾಮಣ್ಣ, ಬಾಲಕೃಷ್ಣ ಎಂಬ ಹೆಸರಿನ 5 ಮಂದಿಯನ್ನು ವಶಪಡಿಸಿಕೊಂಡ ಘಟನೆ ಆ.05 ರಂದು ಸಂಜೆ ನಡೆದಿದೆ.

ಸದ್ರಿಯವರ ವಶದಿಂದ ಒಟ್ಟು ನಗದು ರೂ. 5410/- ರೂಪಾಯಿ, 3 ಹುಂಜ ಕೋಳಿಗಳು, 2 ಸಂಖ್ಯೆಯ ಕೋಳಿ ಅಂಕಕ್ಕೆ ಬಳಸುವ ಕತ್ತಿಗಳನ್ನು ಹಾಗೂ ಸ್ಥಳದಲ್ಲಿದ್ದ 04 ದ್ವಿಚಕ್ರ ವಾಹನಗಳನ್ನು ಸ್ವಾಧೀನ ಪಡೆಸಿಕೊಂಡಿದ್ದು, ಪ್ರಕರಣದ ಬಗ್ಗೆ ಮಾನ್ಯ ನ್ಯಾಯಾಲಯದಿಂದ ಅನುಮತಿ ಪಡೆದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 58/2024 ಕಲಂ: 87 ಕರ್ನಾಟಕ ಪೊಲೀಸ್‌ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ದ ಸಭೆ

Suddi Udaya

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕಿ ಮೇರಿ ಗ್ರೇಸ್ ಮೋರಿಸ್ ನಿಧನ

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಕನ್ಯಾನ ಸದಾಶಿವ ಶೆಟ್ಟಿ ರವರಿಗೆ ಸನ್ಮಾನ

Suddi Udaya

ಶಾಸಕ ಹರೀಶ್ ಪೂಂಜರಿಗೆ ವಿಚಾರಣೆಗೆ ಬರಲು ಪೊಲೀಸರು ನೋಟಿಸು ನೀಡಿಲ್ಲ: ಶಾಸಕರಿಗೆ ಗೃಹ ಬಂಧನದಂತೆ ಪೊಲೀಸರು ಮಾಡಿದ್ದಾರೆ

Suddi Udaya
error: Content is protected !!