ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಅಡಿಕೆ ಕೃಷಿಯಲ್ಲಿ ಸಮಗ್ರ ಪೋಷಕಾಂಶ ನಿರ್ವಹಣೆಯ ಬಗ್ಗೆ ಮತ್ತು ಅಡಿಕೆ ತೋಟದಲ್ಲಿ ಅಂತರ ಬೆಳೆಗಳ ಬಗ್ಗೆ ಆ.8 ರಂದು ಪೂರ್ವಾಹ್ನ 10 ರಿಂದ ಸಂಜೆ 5 ಗಂಟೆಯವರೆಗೆ ಒಂದು ದಿನದ ಸಾಂಸ್ಥಿಕ ತರಬೇತಿ ಹಮ್ಮಿಕೊಳ್ಳಲಾಗಿದೆ.
ಐ.ಸಿ.ಏ.ಆರ್. ಕೇಂದ್ರೀಯ ಪ್ಲಾಂಟೇಶನ್ ಬೆಳೆಗಳ ಸಂಶೋಧನಾ ಕೇಂದ್ರ (ಸಿಪಿಸಿಆರ್‌ಐ) ವಿಟ್ಲದ ವಿಜ್ಞಾನಿಗಳು ಮತ್ತು ಪ್ರಗತಿಪರ ರೈತರಾದ ಪ್ರಭಾಕರ ಮಯ್ಯ ಸುರ್ಯ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಭಾಗವಹಿಸುವ ರೈತರು ಖಡ್ಡಾಯವಾಗಿ ಎಫ್‌ಐಡಿ ಅಥವಾ ಚುನಾವಣಾ ಗುರುತಿನ ಚೀಟಿಯನ್ನು ತರುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.