ಬೆಳ್ತಂಗಡಿ: 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭತ್ತದ ಬೆಳೆಯಲ್ಲಿ ತಾಲ್ಲೂಕು, ಜಿಲ್ಲಾ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬಹುಮಾನ ಮೊತ್ತ: ತಾಲೂಕುಮಟ್ಟ ಪ್ರಥಮ 15 ಸಾವಿರ, ದ್ವೀತಿಯ 10 ಸಾವಿರ, ತೃತೀಯ 5 ಸಾವಿರ, ಜಿಲ್ಲಾಮಟ್ಟ ಪ್ರಥಮ 30 ಸಾವಿರ, ದ್ವೀತಿಯ 25 ಸಾವಿರ, ತೃತೀಯ 20 ಸಾವಿರ, ರಾಜ್ಯಮಟ್ಟ ಪ್ರಥಮ 50 ಸಾವಿರ, ದ್ವಿತೀಯ 40 ಸಾವಿರ, ತೃತೀಯ 35 ಸಾವಿರ. ಬೆಳೆ ಸ್ಪರ್ಧೆಯಲ್ಲಿ ಭಾಗವಹಿಸುವ ರೈತರು ಮತ್ತು ರೈತ ಮಹಿಳೆಯರು ಕನಿಷ್ಟ ಒಂದು ಎಕರೆ ಪ್ರದೇಶದಲ್ಲಿ ಭತ್ತದ ಬೆಳೆ ಬೆಳೆದಿದ್ದು ಕಂದಾಯ ಇಲಾಖೆ ಪ್ರಕಾರ ಜಮೀನು ಹೊಂದಿರಬೇಕು ಅಥವಾ ಸ್ವಂತ ಜಮೀನು ಹೊಂದಿರದಿದ್ದರೂ ಸಹ ಬೇಸಾಯದಲ್ಲಿ ತೊಡಗಿರುವ ಕೃಷಿಕರು ಜಮೀನು ಮಾಲಿಕರಿಂದ ಸಾಮಾನ್ಯ ವ್ಯವಹಾರಿಕ ಅಧಿಕಾರ (ಜಿಪಿಎ) ಹೊಂದಿರಬೇಕು, ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ರೈತ ಸಂಪರ್ಕ ಕೇಂದ್ರ/ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ಪಡೆದು ಭರ್ತಿ ಮಾಡಿ ಅರ್ಜಿಯನ್ನು ಆಗಸ್ಟ್ 31 ರೊಳಗಾಗಿ ಸಲ್ಲಿಸಬೇಕು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ರೈತರು ಜಾತಿ ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.