32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಅಯೋಜನೆಯಲ್ಲಿ ಆ.6 ರಂದು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ನಡೆಯಿತು.

ಬಾಲಕರ ವಿಭಾಗದಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ, ಸೈಂಟ್ ಬ್ರಿಜಿಡ್ಸ್ ಸುಳ್ಯ ದ್ವಿತೀಯ ಸ್ಥಾನ ಪಡೆಯಿತು.

ಬಾಲಕಿಯರ ವಿಭಾಗದಲ್ಲಿ ಪ್ರಥಮ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪಡೆದರೆ ದ್ವಿತೀಯ ಸ್ಥಾನವನ್ನು ಸೈಂಟ್ ಬ್ರಿಜಿಡ್ಸ್ ಸುಳ್ಯ ಪಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಜಂಟಿ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಬಾಲಕ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದ ಉದ್ಘಾಟನೆಯನ್ನು ಕುಮಾರಸ್ವಾಮಿ ವಿದ್ಯಾಲಯದ ಹಿರಿಯ ವಿದ್ಯಾರ್ಥಿ ಹಾಗೂ ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಆಟಗಾರ ಕಾರ್ತಿಕ್ ಕಕ್ಕೆ ಪದವು ಉದ್ಘಾಟಿಸಿದರು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಚಂದ್ರಶೇಖರ್ ನಾಯರ್ ವಹಿಸಿದ್ದರು, ಸಮಾರಂಭದ ವೇದಿಕೆಯಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜಾತ ಕಲ್ಲಾಜೆ, ಕುಮಾರಸ್ವಾಮಿ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಭಾರತಿ ದಿನೇಶ್, ಸಂಸ್ಥೆಯ ಉಪಾಧ್ಯಕ್ಷರಾದ ಶಿವರಾಮ್ ಏನೇಕಲ್, ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾದ ರವಿ ಕಕ್ಕೆ ಪದವು ಹಾಗೂ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿರತ್ನ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಈ ದಿನಕರ್ ನಿರೂಪಿಸಿದರು ಹಾಗೂ ಶ್ರೀಮತಿ ಕಾರ್ತಿಕ ವಂದಿಸಿದರು.

Related posts

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

Suddi Udaya

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

Suddi Udaya

ಶುಭಾವಿವಾಹ ಧನಂಜಯಮತ್ತುಶೋಭಾ

Suddi Udaya

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

Suddi Udaya
error: Content is protected !!