25.7 C
ಪುತ್ತೂರು, ಬೆಳ್ತಂಗಡಿ
September 20, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಸ್ಥಿಕ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಅಡಿಕೆ ಬೆಳೆಯ ಸಮಗ್ರ ನಿರ್ವಹಣೆ ಕುರಿತು ಒಂದು ದಿನದ ಸಾಂಸ್ಥಿಕ ತರಬೇತಿ ಕಾರ್ಯಕ್ರಮ ಆ.8ರಂದು ನಡೆಯಿತು.

ಕೇಂದ್ರೀಯ ಪ್ಲಾಂಟೇಶನ್ ಬೆಳೆಗಳ ಸಂಶೋಧನಾ ಸಂಸ್ಥೆ, ಪ್ರಾದೇಶಿಕ ಕೇಂದ್ರ ವಿಟ್ಲ ಇಲ್ಲಿಯ ತೋಟಗಾರಿಕೆ ವಿಜ್ಞಾನಿ ಡಾ. ಭವಿಷ್ಯ ಇವರು ಅಡಿಕೆಯ ವಿವಿಧ ಪ್ರಚಲಿತ ತಳಿಗಳು, ಸಮಗ್ರ ಪೋಷಕಾಂಶ ನಿರ್ವಹಣೆ, ರಸಾವರಿ ಪದ್ಧತಿಗಳು, ಮುಖ್ಯ ರೋಗ ಹಾಗೂ ಕೀಟಗಳ ಹತೋಟಿ ವಿಧಾನದ ಬಗ್ಗೆ ಪೂರ್ವಾಹ್ನ ಉಪನ್ಯಾಸ ನೀಡಿದರು.

ಅಪರಾಹ್ನದ ಅವಧಿಯಲ್ಲಿ ಅಡಿಕೆಯಲ್ಲಿ ಅಂತರ ಬೆಳೆಗಳಾಗಿ ಕರಿಮೆಣಸು ಹಾಗೂ ಕೋಕೋ ಬೆಳೆಗಳ ಬಗ್ಗೆ ಪ್ರಗತಿಪರ ರೈತರಾದ ಶ್ರೀ ಪ್ರಭಾಕರ ಮಯ್ಯ ಸುರ್ಯ ಇವರು ವಿಷಯ ಮಂಡನೆ ಮಾಡಿದರು.

ತರಬೇತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶದ ಒಟ್ಟು 53 ಜನ ರೈತ ಬಾಂಧವರು ಭಾಗವಹಿಸಿದ್ದರು. ಕೃಷಿ ಅಧಿಕಾರಿ ಗಣೇಶ್ ತರಬೇತಿಯನ್ನು ಆಯೋಜಿಸಿದ್ದರು.

Related posts

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಮಹಾಸಭೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಧಮ೯ಸ್ಥಳದ ದಿಲೀಫ್ ರವರ ಶವ ಪತ್ತೆ ಪ್ರಕರಣ : ಅಪಘಾತ ಎಸಗಿದ ತರಕಾರಿ ಸಾಗಾಟದ ಪಿಕಫ್ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya
error: Content is protected !!